ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನ, ಮರಳು ಜಪ್ತಿ

Crime Logo
Published on

ರಾಣೆಬೆನ್ನೂರ: ತುಂಗಭದ್ರಾ ನದಿಪಾತ್ರದಲ್ಲಿ ಅಕ್ರಮವಾಗಿ ಮರಳು ತುಂಬುತ್ತಿದ್ದ ಎರಡು ಮಜಡಾ ವಾಹನ ಮತ್ತು 7 ಮೆಟ್ರಿಕ್​ ಟನ್​ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಲೂಕಿನ ಕೋಣತಂಬಿಗೆ ಗ್ರಾಮದ ಬಳಿ ಕೆಲವರು ತುಂಗಭದ್ರಾ ನದಿಪಾತ್ರದ ಬಳಿ ಅಕ್ರಮವಾಗಿ ಮರಳು ತುಂಬುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಗ್ರಾಮೀಣ ಠಾಣೆ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡಿದ್ದಾರೆ. ನಾಲ್ವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net