

ಶಿರಸಿ:ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಹತ್ತಕ್ಕೂ ಹೆಚ್ಚು ಟಿಪ್ಪರ್ ಲಾರಿಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಶಿರಸಿ ಪೊಲೀಸರು ಮಂಗಳವಾರ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.ಇ
ಇದನ್ನೂಓದಿ: ಅಪರೂಪದ ಬಿಳಿ ಹೆಬ್ಬಾವು ರಕ್ಷಣೆ
ಹೊನ್ನಾವರ ಹಾಗೂ ಇತರೆ ಸ್ಥಳಗಳಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ನಗರದಲ್ಲಿ ವಾಹನಗಳನ್ನು ತಡೆದಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಆಶಾ, ನಗರ ಠಾಣೆ ಪಿಎಸ್‌ಐ ರಾಜಕುಮಾರ, ಮಾರುಕಟ್ಟೆ ಠಾಣೆ ಪಿಎಸ್‌ಐ ರತ್ನಾ ಕುರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.