ಮರದ ದಿಮ್ಮಿ ಅಕ್ರಮ ಸಾಗಾಟ ಪತ್ತೆ

Mng_wood
Published on

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ 5.50 ಲಕ್ಷ ರೂ. ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ಮಂಗಳೂರಿನ ಅರಣ್ಯ ಸಂಚಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ , ರಿಚರ್ಡ್ ಡಿಸೋಜ ಹಾಗೂ ವಾಹನ ಚಾಲಕ ಜಯಪ್ರಕಾಶ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net