ಪಡಿತರ ಅಕ್ಕಿ ಅಕ್ರಮ ಸಾಗಣೆ

13-kollegalphoto-1
ಪಡಿತರ ಅಕ್ಕಿ ಸಾಗಿಸುತ್ತಿದ್ದ ಪ್ಯಾಸೆಂಜರ್ ಆಟೋವನ್ನು ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ವರ್ಷಾ, ಆಹಾರ ನಿರೀಕ್ಷಕರ ರಾಜೇಂದ್ರ ಪ್ರಸಾದ್ ವಶಕ್ಕೆ ಪಡೆದಿದ್ದಾರೆ. ರಾಜು, ವೀರೇಂದ್ರ ಇದ್ದಾರೆ.
Published on

ಕೊಳ್ಳೇಗಾಲ: ಬಡವರಿಗೆ ಸರ್ಕಾರ ನೀಡುವ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದವನನ್ನು ಗುರುವಾರ ಪಟ್ಟಣ ಪೊಲೀಸರು ಬಂಧಿಸಿ 432 ಕೆ.ಜಿ. ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ನಿವಾಸಿ ದಿಲೀಪ್ ಬಂಧಿತ ಆರೋಪಿ. ಕೊಳ್ಳೇಗಾಲದಿಂದ ನರಸೀಪುರ ಕಡೆಗೆ ಪ್ಯಾಸೆಂಜರ್ ಆಟೋದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ವರ್ಷಾ ಮತ್ತು ತಂಡ ಹಾಗೂ ಆಹಾರ ನಿರೀಕ್ಷಕ ರಾಜೇಂದ್ರ ಪ್ರಸಾದ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಹೊಸ ಹಂಪಾಪುರ ಗ್ರಾಮದ ಬ್ರಿಡ್ಜ್ ಬಳಿ ಆಟೋ ಮೇಲೆ ದಾಳಿ ನಡೆಸಿ ಚಾಲಕ ದಿಲೀಪ್‌ನನ್ನು ಬಂಧಿಸಿದ್ದಾರೆ. ಅಲ್ಲದೇ ಆಟೋದಲ್ಲಿದ್ದ 432 ಕೆ.ಜಿ. ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾಳಿಯಲ್ಲಿ ಪಟ್ಟಣ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ವೀರೇಂದ್ರ, ರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net