ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ

rice
Published on

ಗಂಗೊಳ್ಳಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅನ್ನಭಾಗ್ಯ ಯೋಜನೆಯ 107 ಕ್ವಿಂಟಾಲ್ ಅಕ್ಕಿಯನ್ನು ಕುಂದಾಪುರ ತಾಲೂಕು ಆಹಾರ ನಿರೀಕ್ಷಕರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಪಡೆದ ಕುಂದಾಪುರ ಆಹಾರ ನಿರೀಕ್ಷಕ ಸುರೇಶ್ ಎಚ್.ಎಸ್. ಹಾಗೂ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಮರವಂತೆ ಬೀಚ್ ಸಮೀಪದ ಕ್ರಾಸ್ ರಸ್ತೆಯಲ್ಲಿ ರಾ.ಹೆ 66ರ ವಾರ್ಗವಾಗಿ ಬರುತ್ತಿದ್ದ ಲಾರಿಯನ್ನು ತಡೆದು ಪರಿಶೀಲಿಸಿದಾಗ 214 ಚೀಲಗಳಲ್ಲಿ ತುಂಬಿಸಿದ್ದ 107 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ. ಭಟ್ಕಳದ ಶಫೀಕ್ ಸಾಹೇಬ್ ಎಂಬುವರು ಮಂಡ್ಯದ ಶ್ರೀ ಬಸವೇಶ್ವರ ಅಗ್ರೋ ರೈಸ್ ಇಂಡಸ್ಟ್ರೀಸ್‌ಗೆ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ವಾಡುತ್ತಿದ್ದರು ಎಂದು ತಿಳಿದುಬಂದಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net