ಒತ್ತುವರಿ ಮಾಡಿದ್ದ ಸರ್ಕಾರಿ ಜಾಗ ಮರುವಶ...

Otthuvari Lead
Published on

ಮಲ್ಪೆ ಬೀಚ್ ಬಳಿ ಜಿಲ್ಲಾಡಳಿತದಿಂದ ತೆರವು ಕಾರ್ಯಾಚರಣೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಅಕ್ರಮವಾಗಿ ಸರ್ಕಾರಿ ಜಾಗ ಕಬಳಿಸಿದವರಿಗೆ ಜಿಲ್ಲಾಡಳಿತ ಬಿಸಿ ಮುಟ್ಟಿಸುತ್ತಿದೆ. ತಾಲೂಕಿನ ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಮರು ವಶಮಾಡಿಕೊಂಡಿದೆ.

Otthuvari 1
ಸಮುದ್ರ ತೀರದಲ್ಲಿರುವ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಅಂಗಡಿ ಶೆಡ್​ ಹಾಗೂ ಮನೆ ನಿರ್ಮಿಸಿಕೊಂಡಿದ್ದನ್ನು ಹಿಟಾಚಿ ಮೂಲಕ ಮಂಗಳವಾರ ಧ್ವಂಸ ಮಾಡಲಾಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅವರ ಸೂಚನೆಯಂತೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಒತ್ತುವರಿ ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯಲಾಯಿತು.
Otthuvari 2
ಯಾವುದೇ ಖಾಸಗಿ ವ್ಯಕ್ತಿಗಳು ಸರ್ಕಾರಿ ಜಾಗ ಒತ್ತುವರಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹವರ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ತಹಸೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net