ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶ

17M.D.R.5
ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ತೊರೆಶೆಟ್ಟಿಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ ಮರಳನ್ನು ವಶಪಡಿಸಿಕೊಂಡಿದೆ.
Published on

ಮದ್ದೂರು: ತಾಲೂಕಿನ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಸೋಮವಾರ ವಶಪಡಿಸಿಕೊಂಡಿದೆ.

ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ತೂಬಿನಕೆರೆ, ತೊರೆಶೆಟ್ಟಿಹಳ್ಳಿ ಹಾಗೂ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಗ್ರಾಮಗಳ ವ್ಯಾಪ್ತಿಯ ಶಿಂಷಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆ, ದಾಸ್ತಾನು ಸ್ಥಳಕ್ಕೆ ದಿಢೀರ್ ದಾಳಿ ನಡೆಸಿ, ಸುಮಾರು 320 ಮೆಟ್ರಿಕ್ ಟನ್ ಮರಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಮರಳುಗಾರಿಕೆ ನಡೆಸುತ್ತಿರುವವರ ವಿರುದ್ಧ್ದ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗುವುದೆಂದು ಭೂವಿಜ್ಞಾನಿ ಮಹೇಶ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕರಾದ ನರೇಶ, ಪ್ರಕಾಶ , ಕಂದಾಯ ನಿರೀಕ್ಷಕರಾದ ಗೋವರ್ಧನ, ಮುರಳೀಧರ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net