

ಕೋಲಾರ : ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಗುರುವಾರ ಮಾಲೂರು-ಹೊಸೂರು ಮುಖ್ಯರಸ್ತೆಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿ ಒಟ್ಟೂ 72 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.
ಮಾಲೂರಿನ ಎಚ್.ಹೊಸಕೋಟೆ ಗ್ರಾಪಂ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಿಂದ ಹೊಸೂರಿಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮದ್ಯ ಸಾಗಿಸುತ್ತಿದ್ದ ಮಾಹಿತಿ ಆಧರಿಸಿ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ನಿರ್ದೇಶನದ ಮೇರೆಗೆ ಉಪ ಅಧೀಕ್ಷಕ ಟಿ.ಗೋವಿಂದಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. 25.380 ಲೀಟರ್ ಮದ್ಯ, 46.800 ಲೀಟರ್ ಬಿಯರ್ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕಾರು ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಾಗಿದೆ.