

ಭಟ್ಕಳ: ಪಡಿತರ ಯೋಜನೆಗೆ ವಿತರಿಸಲು ಬಂದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಏಳು ಮಂದಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಗಣೇಶ ನಗರದ ಸಮೀರ ಮುಗಳಿಹೊಂಡ, ಸಬೂಲ್, ರಾಮನಗರದ ಮಲ್ಲಿಕಾರ್ಜುನ ಆರ್.ಮಾಗಡಿ, ಹೊಂಬೆಗೌಡನ ಹಳ್ಳಿಯ ನಿತೀನ ಹೆಚ್.ಎನ್., ಸೇರಿದಂತೆ ಇತರ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಪಿಐ ಮಂಜುನಾಥ ಲಿಂಗಾರೆಡ್ಡಿ ನೇತೃತ್ವದ ತಂಡ ಹಾಗೂ ಆಹಾರ ನಿರೀಕ್ಷಕ ಉದಯ ತಳವಾರ ಅವರ ಸಹಯೋಗದಲ್ಲಿ ನಡೆಸಿದ ದಾಳಿಯಲ್ಲಿ 228 ಚೀಲ (ಪ್ರತಿ ಚೀಲ 50 ಕೆ.ಜಿ)ಗಳಲ್ಲಿ ಒಟ್ಟು 11,400 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಗಿದೆ. ಇದರ ಮೌಲ್ಯ ರೂ. 3,87,600 ಎಂದು ಲೆಕ್ಕ ಹಾಕಲಾಗಿದೆ. ಅಕ್ಕಿ ಸಾಗಿಸಲು ಬಳಸಲಾಗಿದ್ದ ಅಶೋಕ ಲೈಲೆಂಡ್ ಲಾರಿ, ಮಾರುತಿ ಓಮ್ಮಿ ಹಾಗೂ ಅಶೋಕ ಲೈಲೆಂಡ್ ದೋಸ್ತ್ ವಾಹನಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಆಹಾರ ನಿರೀಕ್ಷಕ ಉದಯ ದ್ಯಾಮಪ್ಪ ತಳವಾರ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು,ಪಿಎಸ್‌ಐ ರನ್ ಗೌಡ ಪ್ರಕರಣ ದಾಖಲಿಸಿಕೊಂಡಿದ್ದಾರೆ.