ಸಮುದಾಯ ಸಹಕಾರ ಅಗತ್ಯ

AML BHETI 15
Published on

ಐಮಂಗಲ: ಕರೊನಾ ವೈರಸ್ ನಿಯಂತ್ರಿಸುವಲ್ಲಿ ಸಮುದಾಯದ ಸಹಕಾರ ಬಹುಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ಸುರೇಶ್‌ಬಾಬು ತಿಳಿಸಿದರು.

ಹೋಬಳಿಯ ಯರಬಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕರೊನಾ ವೈರಸ್ ನಿಯಂತ್ರಣಕ್ಕೆ ಕ್ರಿಮಿನಾಶಕ ಸಿಂಪಡಣೆಗೆ ಚಾಲನೆ ನೀಡಿ ಮಾತನಾಡಿದರು.

ಮನೆ ಹಾಗೂ ಸುತ್ತಮುತ್ತಲಿನ ವಾತಾವರಣದ ಜತೆಗೆ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ವಿನಾಕಾರಣ ಮನೆಯಿಂದ ಹೊರಬರಬಾರದು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗುಂಪುಗಟ್ಟಿ ನಿಲ್ಲಬಾರದು. ವೃದ್ಧರು, ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ, ಪಿಡಿಒ ಬಸವರಾಜ್, ತಾಪಂ ಸದಸ್ಯೆ ಪುಷ್ಪಾ ರಂಗನಾಥ್, ಕಂದಿಕೆರೆ ಸುರೇಶ್‌ಬಾಬು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net