ಅಪಘಾತದಲ್ಲಿ ಒಬ್ಬ ಸಾವು

CTD AML APAGATHA 18
Published on

ಐಮಂಗಲ: ಹೋಬಳಿಯ ಪಾಲವ್ವನಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ವಾಹನಕ್ಕೆ ಹಿಂದಿನಿಂದ ಗೂಡ್ಸ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.

ಘಟನೆ ವಿವರ: ರಾಣೆಬೆನ್ನೂರು ತಾಲೂಕು ಇಟಗಿ ಗ್ರಾಮದಿಂದ ರೇಷ್ಮೆ ಗೂಡು ಹಾಕಿಕೊಂಡು ಶಿಡ್ಲಘಟ್ಟದ ಮಾರುಕಟ್ಟೆಗೆ ಹೋಗಿ ವಾಪಸ್ಸಾಗುತ್ತಿದ್ದ ಟಾಟಾ ಏಸ್ ವಾಹನ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಗಾಡಿಯಲ್ಲೇ ಸಿಕ್ಕಿ ಹಾಕಿಕೊಂಡಿದ್ದ ಚಾಲಕ ಹಾಗೂ ಸಹಾಯಕನನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಚಾಲಕ ವೆಂಕಟೇಶ್ (29) ಮೃತಪಟ್ಟಿದ್ದಾನೆ.

ಸಿಪಿಐ ಕೆ.ಆರ್.ರಾಘವೇಂದ್ರ, ಪ್ರೊಬೇಷನರಿ ಪಿಎಸ್‌ಐ ಪರಶುರಾಮ್ ಎನ್.ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net