ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ

AML BHOOMI 27 (2)
Published on

ಐಮಂಗಲ: ಗ್ರಾಮೀಣ ಪ್ರದೇಶದ ಮೂಲ ಸೌಕರ್ಯಗಳಿಗೆ ಒತ್ತು ನೀಡಿ ಅಭಿವೃದ್ಧಿಗೆ ಮುಂದಾಗಲಾಗುವುದು ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಭರವಸೆ ನೀಡಿದರು.

ಹೋಬಳಿಯ ಹೊಸನಾಯಕನಹಟ್ಟಿ ಗ್ರಾಮದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು

ಹಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ರಸ್ತೆ ಇರಲಿಲ್ಲ. ಈ ಹಿಂದೆ ನೀಡಿದ್ದ ಭರವಸೆಯಂತೆ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹಲವಾರು ಯೋಜನೆ ಹಾಕಿಕೊಂಡು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷೆ ಟಿ.ಜಯಮ್ಮ, ಜಿಪಂ ಸದಸ್ಯೆ ಟಿ.ಆರ್.ರಾಜೇಶ್ವರಿ, ಸದಸ್ಯರಾದ ಬೋರಯ್ಯ, ಮಲ್ಲಿಕಾರ್ಜುನ, ಎನ್.ಉಮಾಪತಿ, ಕೆ.ದ್ಯಾಮಣ್ಣ, ಶಿವಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net