ಲಾಕ್‌ಡೌನ್‌ಗೆ ಹಳ್ಳಿಗಳಲ್ಲಿ ಸ್ಪಂದನೆ

AML BAND 1
Published on

ಐಮಂಗಲ: ದೇಶವ್ಯಾಪಿ ವಿಧಿಸಿರುವ ಲಾಕ್‌ಡೌನ್ ಆದೇಶಕ್ಕೆ ಗ್ರಾಮೀಣ ಪ್ರದೇಶದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮನೆಗೆ ಒಬ್ಬರಂತೆ ಹೊರ ಬರುವ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ವಸ್ತು ಖರೀದಿಸಿ ಮರಳಿ ಮನೆ ಸೇರಿಕೊಳ್ಳುತ್ತಿದ್ದಾರೆ.

ಹಾಲು, ಹಣ್ಣು, ತರಕಾರಿ, ದಿನಸಿ ಅಂಗಡಿಗಳ ಮಾಲೀಕರು ಬೆಳಗ್ಗೆ 10ಕ್ಕೆ ಸ್ವಯಂ ಪ್ರೇರಿತರಾಗಿ ಬಾಗಿಲು ಹಾಕಲಾಗುತ್ತಿದ್ದು, ಅನಗತ್ಯವಾಗಿ ಓಡಾಡುವವರಿಗೆ ಪೊಲೀಸರು ತಿಳಿವಳಿಕೆ ನೀಡಿ ಮನೆಗೆ ಕಳುಹಿಸುತ್ತಿದ್ದಾರೆ.

ಸ್ಥಳೀಯ ಠಾಣೆಯಿಂದ ಎಚ್‌ಚ್.ಡಿ.ಪುರ ಹಾಗೂ ವದ್ದಿಕೆರೆ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಯುಗಾದಿ ಹಬ್ಬದ ಹಿನ್ನೆಲೆ ಬೆಳಗ್ಗೆ ಪೂಜೆ ಸಲ್ಲಿಸಿ ದೇಗುಲಗಳಿಗೆ ಬಾಗಿಲು ಹಾಕಲಾಯಿತು.

ಬುರುಜಿನರೊಪ್ಪ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಟಾಂ ಟಾಂ ಮೂಲಕ ಜನರಲ್ಲಿ ಕರೊನಾ ಜಾಗೃತಿ ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net