ಪರಿಸರ ಸಮತೋಲನ ಕಾಪಾಡಿ

AML SASI 06
Published on

ಐಮಂಗಲ: ಪ್ರತಿಯೊಬ್ಬರು ಸಸಿ ನೆಡುವ ಮೂಲಕ ಪರಿಸರ ಸಮತೋಲನ ಕಾಪಾಡಲು ಮುಂದಾಗಬೇಕು ಎಂದು ಧರ್ಮಸ್ಥಳ ಸಂಸ್ಥೆಯ ಯೋಜನಾ ಮೇಲ್ವಿಚಾರಕ ಎಂ.ವೀರೇಶಪ್ಪ ಹೇಳಿದರು.

ಹೋಬಳಿಯ ಮಾರೇನಹಳ್ಳಿಯಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಸಸಿ ವಿತರಿಸಿ ಮಾತನಾಡಿದರು.

ಪ್ರತಿಯೊಬ್ಬರು ಪರಿಸರದ ರಕ್ಷಣೆಗೆ ಮುಂದಾಗಬೇಕು. ಮನೆಗಳ ಸುತ್ತಲು ಗಿಡ ಮರ ಬೆಳೆಸಿ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದರು.

ಕೃಷಿ ಮೇಲ್ವಿಚಾರಕ ಮಹಾಂತೇಶ್, ಒಕ್ಕೂಟದ ಪದಾಧಿಕಾರಿಗಳಾದ ರಂಗನಾಥ್, ಲೇಪಾಕ್ಷಿ, ಮುಖ್ಯಶಿಕ್ಷಕ ನಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net