ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಿ: ಹರಪಳ್ಳಿ ರವೀಂದ್ರ

pusthaka vitharane
Published on

ಕೂಡಿಗೆ: ಸ್ವಾಮಿ, ವಿವೇಕಾನಂದ, ಮಹಾತ್ಮ ಗಾಂಧೀಜಿ, ಎಪಿಜೆ ಅಬ್ದುಲ್ ಕಲಾಂ ರಂತಹ ರಾಷ್ಟ್ರದ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳುವ ಮೂಲಕ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಉದ್ಯಮಿ ಹರಪಳ್ಳಿ ರವೀಂದ್ರ ಹೇಳಿದರು.

ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢ ಶಾಲೆ ಹಾಗೂ ಕೂಡಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ವಿತರಣೆ ಮಾಡಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಂಘ ಸಂಸ್ಥೆಗಳು ಒಟ್ಟು ನೀಡಬೇಕು. ಸರ್ಕಾರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹೆಚ್ಚಿನ ಒತ್ತು ನೀಡುತ್ತಿದೆ. ಜೊತೆಗೆ ಉಚಿತ ಶಿಕ್ಷಣ ಅದರೊಂದಿಗೆ ವಿವಿಧ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಪಠ್ಯಪುಸ್ತಕ ಸಮವಸ್ತ್ರ ವಿದ್ಯಾರ್ಥಿ ವೇತನ ಬಿಸಿಯೂಟ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಿದೆ. ಈ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸ್ಥಳೀಯ ನಿವಾಸಿ ನಿವೃತ್ತ ಶಿಕ್ಷಕ ರಾಜೇಗೌಡ ಮಾತನಾಡಿ, ಸರ್ಕಾರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹೆಚ್ಚಿನ ಒತ್ತು ನೀಡುತ್ತಿದೆ. ಜೊತೆಗೆ ಎಲ್ಲಾ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಒತ್ತು ನೀಡಬೇಕು ಎಂದರು.

ಮಕ್ಕಳಿಗೆ ಉಚಿತ ಶಿಕ್ಷಣದೊಂದಿಗೆ ವಿವಿಧ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಪಾಠ್ಯಪುಸ್ತಕ, ಸಮವಸ್ತ್ರ, ವಿದ್ಯಾರ್ಥಿ ವೇತನ, ಬಿಸಿಊಟ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಿದೆ. ಈ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

ನಂತರ ಮಾತನಾಡಿದ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪ ಮಾತನಾಡಿ, ನಮ್ಮ ಶಾಲೆಗೆ ಕಳೆದ ಹಲವು ವರ್ಷಗಳಿಂದ ಸಮಾಜ ಸೇವಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಕಳೆದ ಹಲವು ವರ್ಷಗಳಿಂದಲೂ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿಕೊಂಡು ಬರುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಂಘಸಂಸ್ಥೆಗಳು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದ ವತಿಯಿಂದ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಕುಸುಮ, ಸೋಮಯ್ಯ, ಕಾಂತರಾಜ್, ಗಣೇಶ್ ಕುಮಾರ್, ರೂಪಕಲಾ, ಪ್ರತಾಪ್, ಸುರೇಶ್, ದೀಪಕ್, ರಘು, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮಂಜುನಾಥ್, ಕಾಶಿಮ್ ಮಾದಾಪುರ ಹಾಗೂ ಬಸಪ್ಪ, ಹರಪಳ್ಳಿ ರವೀಂದ್ರ ಅವರ ಪುತ್ರ ಅಚ್ಚಲ್ ರವೀಂದ್ರ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net