ಸ್ವಗ್ರಾಮದತ್ತ ತೆರಳಿದ ವಲಸೆ ಕಾರ್ಮಿಕರು

26-05-2020 ALRp01
Published on

ಆಲೂರು : ಎತ್ತಿನಹೊಳೆ ಕಾಮಗಾರಿಯಲ್ಲಿ ದುಡಿಯುತ್ತಿದ್ದ ವಲಸೆ ಕಾರ್ಮಿಕರನ್ನು ತಾಲೂಕು ಆಡಳಿತ ಜಾರ್ಖಂಡ್ ಮತ್ತು ಉತ್ತರಪ್ರದೇಶಕ್ಕೆ ಕಳುಹಿಸಿಕೊಟ್ಟಿತು.

ತಾಲೂಕಿನ ಪಾಳ್ಯ ಹೋಬಳಿಯ ಬೆಳಮೆ ಗ್ರಾಮದಲ್ಲಿ ದುಡಿಯುತ್ತಿದ್ದ ಜಾರ್ಖಂಡ್‌ನ 57 ಮತ್ತು ಉತ್ತರಪ್ರದೇಶದ 12 ಕಾರ್ಮಿಕ ರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಯಿತು. ನಂತರ 2 ಕೆಎಸ್‌ಆರ್‌ಟಿಸಿ ಬಸ್ ಮೂಲಕ ಮಂಗಳೂರು ಮತ್ತು ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕಳುಹಿಸಿಕೊಡಲಾಯಿತು. ಬಳಿಕ ಅಲ್ಲಿಂದ ರೈಲಿನ ಮೂಲಕ ತಮ್ಮ ರಾಜ್ಯಗಳಿಗೆ ತೆರಳಲಿದ್ದಾರೆ.

ತಾಲೂಕು ವೈದ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ, ಲಾಕ್‌ಡೌನ್‌ನಿಂದಾಗಿ ಇಲ್ಲೇ ಉಳಿದಿದ್ದ ಕೂಲಿ ಕಾರ್ಮಿಕರನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ತವರೂರಿಗೆ ಕಳುಹಿಸಿಕೊಡಲಾಯಿತು. ಅಲ್ಲದೆ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಲಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಕಳುಹಿಸಿಕೊಡಲಾಗಿದೆ ಎಂದರು.

ಸರ್ಕಲ್ ಇನ್ಸ್‌ಪೆಕ್ಟರ್ ರೇವಣ್ಣ, ಸಬ್‌ಇನ್ಸ್‌ಪೆಕ್ಟರ್ ಸತ್ಯನಾರಾಯಣ, ಆರೋಗ್ಯ ಇಲಾಖೆ ಸತೀಶ್, ಮೋಹನ್, ತಾಲೂಕು ಕಚೇರಿ ಶಿರಸ್ತೇದಾರ್ ಮಂಜುಳಾ, ಗ್ರಾಮ ಲೆಕ್ಕಾಧಿಕಾರಿ ದೇವೇಂದ್ರಪ್ಪ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net