ವಲಸೆ ಕಾರ್ಮಿಕರ ಆರೋಗ್ಯ ತಪಾಸಿಸಿ

23manju5-Web123
ಬೆಳಗಾವಿ ನಗರದ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಶ್ರಯ ಪಡೆದಿರುವ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಆಲಿಸಿದರು. ಶಾಸಕ ಅನಿಲ ಬೆನಕೆ, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ ಇತರರು ಇದ್ದರು.
Published on

ಬೆಳಗಾವಿ: ನಗರದ ವಿವಿಧ ಭಾಗಗಳಲ್ಲಿರುವ ಹೊರ ರಾಜ್ಯಗಳ ವಲಸೆ ಕಾರ್ಮಿಕರ ಆರೋಗ್ಯವನ್ನು ಮೇಲಿಂದ ಮೇಲೆ ತಪಾಸಣೆಯ ಜತೆಗೆ ಸಮಯಕ್ಕೆ ಸರಿಯಾಗಿ ಆಹಾರ ವಿತರಣೆ ಮಾಡಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ಥಾನ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರನ್ನು ಗುರುವಾರ ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದ ಬಳಿಕ ಮಾತನಾಡಿ, ಎಲ್ಲ ಕಾರ್ಮಿಕರು ಲಾಕ್‌ಡೌನ್ ಅವಧಿ ಮುಗಿಯುವವರೆಗೆ ಸಹಕರಿಸಬೇಕು ಎಂದು ತಿಳಿಸಿದರು.

ಲಾಕ್‌ಡೌನ್‌ನಿಂದಾಗಿ ವಲಸೆ ಕಾರ್ಮಿಕರ ಸಂಚಾರ ನಿರ್ಬಂಧಿಸಿ ಆಯಾ ರಾಜ್ಯ ಹಾಗೂ ಜಿಲ್ಲೆಗಳಲ್ಲಿಯೇ ಅವರಿಗೆ ಊಟ, ವಸತಿ ಸೌಲಭ್ಯ ಒದಗಿಸಲಾಗಿದೆ. ಅದೇ ರೀತಿ ಸಂಕಷ್ಟದಲ್ಲಿ ಸಿಲುಕಿರುವ ಕಾರ್ಮಿಕರು ಅನಿವಾರ್ಯವಾಗಿ ಆಶ್ರಯ ಪಡೆದುಕೊಂಡಿದ್ದು, ಅವರಿಗೆ ಅಗತ್ಯ ಸೌಲಭ್ಯ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಆಯುಕ್ತ ಕೆ.ಎಚ್. ಜಗದೀಶ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net