ಪರಿಭಾವಿತ ಅರಣ್ಯ ಮರುಸಮೀಕ್ಷೆ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಸೂಚಿತ ಪರಿಭಾವಿತ ಅರಣ್ಯ ಪ್ರದೇಶದ ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ಮಾತನಾಡಿದರು. ಸಂಸದ ಡಾ. ಕೆ.ಸುಧಾಕರ್, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ರವಿಕುಮಾರ್ ಮತ್ತಿತರರು ಇದ್ದರು.
21CBP3
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಸೂಚಿತ ಪರಿಭಾವಿತ ಅರಣ್ಯ ಪ್ರದೇಶದ ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ.ಸುಧಾಕರ್ ಮಾತನಾಡಿದರು. ಸಂಸದ ಡಾ. ಕೆ.ಸುಧಾಕರ್, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ರವಿಕುಮಾರ್ ಮತ್ತಿತರರು ಇದ್ದರು.
Published on

ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಸೂಚನೆ- ಜು.15ರೊಳಗೆ ವರದಿ ಸಲ್ಲಿಸುವಂತೆ ನಿರ್ದೇಶನ

ಚಿಕ್ಕಬಳ್ಳಾಪುರ: ಜಿಲ್ಲೆಯ ಪರಿಭಾವಿತ ಅರಣ್ಯ ಪ್ರದೇಶಗಳ (ಡೀಮ್ಡ್ ಾರೆಸ್ಟ್) ಮರುಪರಿಶೀಲನೆಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಸೂಚಿತ ಪರಿಭಾವಿತ ಅರಣ್ಯ ಪ್ರದೇಶದ ಸರ್ವೇ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯವೆಂದು ಸರ್ಕಾರದಿಂದ ಘೋಷಣೆಯಾಗಿರುವ ಪ್ರದೇಶದಲ್ಲಿ ಪ್ರಸ್ತುತ ವಾಸ್ತವದಲ್ಲಿರುವ ಸ್ವಾಭಾವಿಕ ಗಿಡ, ಮರ, ಕೆರೆ ಕುಂಟೆ, ಕಲ್ಲುಬಂಡೆ, ಲೀಸ್ಡ್‌ಲ್ಯಾಂಡ್, ಮುಜರಾಯಿ ಜಮೀನು, ಅರಣ್ಯ, ರೈತರ ಹಿಡುವಳಿ ಜಮೀನನ್ನು ಸರಿಯಾಗಿ ದೃಢೀಕರಿಸಲು ಅಧಿಕಾರಿಗಳು ಮರು ಸರ್ವೇ ಕೈಗೊಂಡು ಪರಿಶೀಲಿಸಬೇಕು. ಜು.15ರೊಳಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದರು.
ಸಂಸದ ಡಾ. ಕೆ.ಸುಧಾಕರ್, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ರವಿಕುಮಾರ್ ಮತ್ತಿತರರು ಇದ್ದರು.
20 ಸಾವಿರ ಹೆಕ್ಟೇರ್ ಪರಿಭಾವಿತ ಅರಣ್ಯ
ಸರ್ಕಾರವು 2022ನೇ ಸಾಲಿನ ಮೇನಲ್ಲಿ ಜಿಲ್ಲೆಯಲ್ಲಿ 20,016.99 ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಅರಣ್ಯ ಪ್ರದೇಶವೆಂದು ಘೋಷಿಸಿದೆ. ಇದರ ನಡುವೆ ಖಾಸಗಿ ಹಿಡುವಳಿ ಜಮೀನು, ಭೋಗ್ಯಕ್ಕೆ ನೀಡಿದ ಸರ್ಕಾರಿ ಜಾಗಗಳನ್ನು ಸಹ ಪರಿಭಾವಿತ ಅರಣ್ಯ ಪ್ರದೇಶವೆಂದು ಗುರುತಿಸಿದೆ ಎಂಬುದು ವಿವಾದಕ್ಕೆ ಕಾರಣವಾಗಿದೆ.

ಆಕ್ಷೇಪಣೆ ಹಿನ್ನೆಲೆಯಲ್ಲಿ ಕ್ರಮ
ಜಿಲ್ಲೆಯಲ್ಲಿ ಜಿಪಿಎಸ್ ಆಧಾರಿತ ಪರಿಭಾವಿತ ಅರಣ್ಯ ಪ್ರದೇಶದ ಸಮೀಕ್ಷೆಗೆ ಸೂಚಿಸಲಾಗಿದೆ. ಪರಿಭಾವಿತ ಅರಣ್ಯ ಪದೇಶ ವಿಚಾರವಾಗಿ ರಾಜ್ಯಾದ್ಯಂತ ಆಕ್ಷೇಪಣೆ ಸಲ್ಲಿಸಿ ಅರ್ಜಿಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಪುನರ್ ಪರಿಶೀಲಿಸಲು ಮುಂದಾಗಿದೆ. ಇದಕ್ಕೆ ಅರಣ್ಯ ಇಲಾಖೆಯ ಅಂತರ್ಜಾಲ ಠಿಠಿ://ಚ್ಟಚ್ಞ.ಜಟ.ಜ್ಞಿ/ಚ್ಟಚ್ಞಚ್ಚಞ ಮೂಲಕ ಮಾಹಿತಿ ಪಡೆದು, ಮರು ಸಮೀಕ್ಷೆ ಕೈಗೊಳ್ಳಬೇಕು. ಇದೇ ವೇಳೆ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಕೆರೆ ಕುಂಟೆ, ಹಿಡುವಳಿ ಜಮೀನು, ಕಲ್ಲುಬಂಡೆ, ಜಮೀನು ಇಲ್ಲವೇ ಅರಣ್ಯ ಕಂಡು ಬಂದಾಗ ವಾಸ್ತವ ಅಂಶಗಳನ್ನು ದಾಖಲೆಗಳಲ್ಲಿ ನಮೂದಿಸಿ, ಷರಾ ಬರೆದು ದೃಢೀಕರಿಸಬೇಕು. ತಾಲೂಕುವಾರು, ಗ್ರಾಮವಾರು, ಸರ್ವೇ ನಂಬರ್‌ವಾರು ಸಮೀಕ್ಷೆಯಾಗಬೇಕು. ಜಿಪಿಆರ್.ಎಸ್. ೆಟೋ ತೆಗೆದು ದಾಖಲೆಗಳನ್ನು ಮೇಲಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸಚಿವರು ಜಿಲ್ಲಾಡಳಿತಕ್ಕೆ ಸೂಚಿಸಿದರು

ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಟ್ಟು

ದಿಬ್ಬೂರಹಳ್ಳಿಯಲ್ಲಿ ರೈತರ ಪ್ರತಿಭಟನೆ- ಸಾಗುವಳಿ ಭೂಮಿಗೆ ಅತಿಕ್ರಮ ಪ್ರವೇಶ, ಬೆಳೆ ನಷ್ಟ ಆರೋಪ


ಶಿಡ್ಲಘಟ್ಟ: ಸರ್ಕಾರವೇ ಸಾಗುವಳಿ ಚೀಟಿ ವಿತರಿಸಿ ಪಹಣಿ ಇರುವ ಜಮೀನುಗಳಲ್ಲಿ ರೈತರು ಕೃಷಿ ಮಾಡಲು ಅಡ್ಡಿಪಡಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ನಡೆ ವಿರೋಧಿಸಿ ಹಸಿರು ಸೇನೆ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಬಣದ ನೂರಾರು ರೈತರು ತಾಲೂಕಿನ ದಿಬ್ಬೂರಹಳ್ಳಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ತಾಲೂಕಿನ ಬಶೆಟ್ಟಹಳ್ಳಿ ಹೋಬಳಿಯ ಕರಿಯಪ್ಪನಹಳ್ಳಿ, ತಲಕಾಯಲಬೆಟ್ಟದ ಆಸುಪಾಸಿನಲ್ಲಿ ರೈತರು ಹಲವು ವರ್ಷಗಳಿಂದಲೂ ಸಾಗುವಳಿ ಮಾಡಿಕೊಂಡು ಬಂದಿದ್ದ ಜಮೀನುಗಳಿಗೆ ಏಕಾಏಕಿ ಬೇಲಿ ಹಾಕಿ ಅಕ್ರಮವಾಗಿ ಪ್ರವೇಶಿಸಿ ಬೆಳೆ ನಷ್ಟ ಮಾಡಿದ ಅರಣ್ಯ ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದರು.
ದಿಬ್ಬೂರಹಳ್ಳಿ ವೃತ್ತದಲ್ಲಿ ಜಮಾಯಿಸಿದ ನೂರಾರು ರೈತರು ಗ್ರಾಮದ ಪೊಲೀಸ್ ಠಾಣೆಗೆ ದೂರು ನೀಡಲು ಕಾಲ್ನಡಿಗೆಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಮಧ್ಯದಲ್ಲಿಯೇ ತಡೆದರು. ಆಗ ರಸ್ತೆಯಲ್ಲೇ ಕುಳಿತ ಪ್ರತಿಭಟನಾಕಾರರು ರೈತರನ್ನು ಒಕ್ಕಲೆಬ್ಬಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ಸರ್ಕಾರವು ಜಮೀನು ಮಂಜೂರು ಮಾಡಿ ಪಹಣಿಯೂ ಇದೆ. ತಾತ ಮುತ್ತಾತಂದಿರ ಕಾಲದಿಂದಲೂ ಕೃಷಿ ಮಾಡುತ್ತಿದ್ದೇವೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಏಕಾಏಕಿ ಜಮೀನುಗಳಿಗೆ ಬೇಲಿ ಹಾಕುತ್ತಿದ್ದಾರೆ. ಇದು ಡೀಮ್ಡ್ ಫಾರೆಸ್ಟ್ ಎಂದು ಸಬೂಬು ಹೇಳಿ ಜಮೀನಿನಲ್ಲಿ ಬೆಳೆದಿದ್ದ ಹೂವು, ಹಣ್ಣು, ತರಕಾರಿ ಬೆಳೆಗಳನ್ನು ನಾಶ ಮಾಡಿ, ಡ್ರಿಪ್ ಪೈಪುಗಳಿಗೆ ಹಾನಿಮಾಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯವನ್ನು ಪ್ರಶ್ನಿಸಿದ ಎಂಟು ರೈತರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕೊಟ್ಟ ದೂರನ್ನು ಪೊಲೀಸರು ದಾಖಲಿಸಿದ್ದಾರೆ. ಆದರೆ, ರೈತರು ದೂರು ಕೊಟ್ಟರೆ ಸ್ವೀಕರಿಸದೆ ಅರಣ್ಯ ಅಧಿಕಾರಿಗಳ ಪರ ನಿಂತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಬೇಕು. ಬೆಳೆ ನಷ್ಟದ ಪರಿಹಾರವನ್ನು ಅವರಿಂದ ಕಟ್ಟಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಬೇಕು. ಅದುವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.

ಡಿವೈಎಸ್‌ಪಿ ಭರವಸೆ
ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಮುರಳೀಧರ್, ಸಿಪಿಐ ಶ್ರೀನಿವಾಸ್, ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಎಸ್‌ಐ ಸತೀಶ್ ಅವರ ಮನವೊಲಿಕೆಗೆ ಒಪ್ಪದೆ ಒಂದು ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಅಂತಿಮವಾಗಿ ರೈತರಿಂದ ದೂರು ಸ್ವೀಕರಿಸಿದ ಡಿವೈಎಸ್ಪಿ, ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಕಾನೂನು ತಜ್ಞರ ಸಲಹೆ ಪಡೆದು ದೂರು ದಾಖಲಿಸುವ ಮತ್ತು ಮುಂದಿನ ಕ್ರಮ ಜರುಗಿಸುವ ಭರವಸೆ ನೀಡಿದರು.ರೈತ ಸಂಘದ ಜಿಲ್ಲಾಧ್ಯಕ್ಷ ರಾಮನಾಥ್, ಜಿಲ್ಲಾ ಉಪಾಧ್ಯಕ್ಷ ವೀರಾಪುರಮುನಿನಂಜಪ್ಪ, ರೈತ ಮುಖಂಡರಾದ ವೇಣುಗೋಪಾಲ್, ತಾದೂರು ಮಂಜುನಾಥ್, ಬಿ.ನಾರಾಯಣಸ್ವಾಮಿ, ಅಶ್ವತ್ಥರೆಡ್ಡಿ, ಎ.ಜಿ.ನಾರಾಯಣಸ್ವಾಮಿ, ಬೀರಪ್ಪ ಇನ್ನಿತರೆ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net