ಪ್ರಜ್ವಲ್ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಯಲಿ

6SND-03
Published on

ಸಿಂಧನೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶಿಕ್ಷೆಗೊಳಪಡಿಸಬೇಕು ಹಾಗೂ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲು ಒತ್ತಾಯಿಸಿ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಗ್ರೇಡ್-2 ತಹಸೀಲ್ದಾರ್ ಚಂದ್ರಶೇಖರಗೆ ಸೋಮವಾರ ಮನವಿ ಸಲ್ಲಿಸಿದವು.

ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಯಾವುದೇ ಒತ್ತಡಗಳಿಗೆ ಮಣಿಯದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದ ಪೆನ್‌ಡ್ರೈವ್ ತನ್ನ ಬಳಿ ಇದೆ ಎಂದು ಹೇಳಿಕೊಂಡಿರುವ ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net