

ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳ ಯೋಜನೆ ಸಂಬಂಧಿಸಿದಂತೆ ಮಾಹಿತಿ ಪಡೆದು ಮಾತನಾಡಿದರು.
ಕಳೆದ ಬಾರಿ ವಿವಿಧ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ. ಕಳೆದ ವರ್ಷ ಶೇಕಡಾವಾರು ಪ್ರಗತಿ ಸಾಧಿಸಲಾಗಿದೆ. ಈ ಬಾರಿಯೂ ಸಹ ಆರಂಭದಿಂದಲೇ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವಂತೆ ಸೂಚನೆ ನೀಡಿದರು.
ಸರ್ಕಾರ ನಿಗದಿ ಮಾಡಿರುವ ಗುರಿಯನ್ನು ತಲುಪಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಸಮಗ್ರ ಗಿರಿಜನ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.