ಜಾತಿ ಗಣತಿ ವರದಿ ಜಾರಿ ನಿಶ್ಚಿತ: ಸಚಿವ ಡಾ.ಎಚ್.ಸಿ. ಮಹದೇವಪ್ಪ

HC-Mahadevappa
Published on

ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ) ವರದಿ ಜಾರಿಗೆ ಬರುವುದು ನಿಶ್ಚಿತ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಜಾರಿ ಕುರಿತು ಪರ-ವಿರೋಧ ಚರ್ಚೆಗಳಾಗುತ್ತಿವೆ. ಅಲ್ಲಿರುವ ವೈಜ್ಞಾನಿಕ ಕಾರಣ ಗಮನಿಸಿ, ಲೋಪ-ದೋಷಗಳನ್ನು ಸರಿಪಡಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.


ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಮರಿಗೌಡರಿಗೆ ಹೆಚ್ಚು ರಕ್ತದೊತ್ತಡ (ಬಿಪಿ) ಇತ್ತು. ಆದರೆ, ಅವರಿಗೆ ಯಾವುದೇ ರಾಜಕಾರಣಿಗಳ ಒತ್ತಡ ಇರಲಿಲ್ಲ. ಅವರಿಗೆ ರಕ್ತದ ಒತ್ತಡ ಹೆಚ್ಚಿದ್ದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net