

ಗುಂಡ್ಲುಪೇಟೆ: ಪಟ್ಟಣದ ವ್ಯಾಪ್ತಿಯಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಉಂಟಾಗುತ್ತಿರುವ ಅವ್ಯವಸ್ಥೆ ತಪ್ಪಿಸಲು ಪೊಲೀಸರು ವಾರದ ಪ್ರತಿ ದಿನವೂ ಒಂದೊಂದು ದಿನದಲ್ಲಿ ಒಂದೊಂದು ಬದಿಗಳಲ್ಲಿ ವಾಹನ ನಿಲ್ಲಿಸಲು ಶನಿವಾರದಿಂದ ಪಾರ್ಕಿಂಗ್ ಸ್ಥಳ ಗುರುತಿಸಿ ಕ್ರಮ ಕೈಗೊಂಡಿದ್ದಾರೆ.
ಪುರಸಭೆ ವೃತ್ತದಿಂದ ಹಳೆ ಬಸ್ ನಿಲ್ದಾಣದವರೆಗೆ ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಭಾನುವಾರ, ಮಂಗಳವಾರ, ಗುರುವಾರ, ಶನಿವಾರದಂದು ಒಂದಾದ ಮೇಲೆ ಒಂದು ದಿನ ಪಾಕಿರ್ಂಗ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ.
ಈ ಬಗ್ಗೆ ವಾಹನ ಸವಾರರಿಗೆ ಅರಿವು ಮೂಡಿಸಲು ಅಲ್ಲಲ್ಲಿ ಫಲಕಗಳನ್ನು ಅಳವಡಿಸಲಾಗಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಎನ್. ಜಯಕುಮಾರ್ ಕೋರಿದ್ದಾರೆ.