

ಹುಬ್ಬಳ್ಳಿ:ಮತೀಯ ಹಿಂಸಾಚಾರ, ಕೋಮು ಗಲಭೆಯ ಹಿನ್ನೆಲೆಯಲ್ಲಿ ಮಣಿಪುರ ಹಾಗೂ ಹರಿಯಾಣದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ ಜಿಲ್ಲಾ ಸಮಿತಿ ವತಿಯಿಂದ ನಗರದ ಚನ್ನಮ್ಮ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಕಳೆದ 3 ತಿಂಗಳಿಂದ ಮಣಿಪುರದಲ್ಲಿ ಮತೀಯ ಹಿಂಸಾಚಾರ ನಿಯಂತ್ರಿಸಲು ಸಾಧ್ಯವಾಗಿಲ್ಲ. ಕಳೆದ 4 ದಿನಗಳಿಂದ ಕೋಮು ಗಲಭೆಯಿಂದ ಹರಿಯಾಣ ತತ್ತರಿಸಿದೆ. ದೇಶದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಅಮಿತ ಷಾ ಸಂಪೂರ್ಣ ವಿಫಲರಾಗಿದ್ದಾರೆ. ಅವರು ನೈತಿಕ ಹೊಣೆ ಹೊತ್ತು, ದೇಶದ ಜನತೆಯ ಕ್ಷಮೆ ಕೋರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಧ್ಯಕ್ಷ ಮಕ್ತುಮ್ ಹುಸೇನ್, ಉಪಾಧ್ಯಕ್ಷ ವಿಜಯ ಗುಂಟ್ರಾಳ, ಗಫೂರ ಅಹ್ಮದ್ ಕುರಟ್ಟಿ, ಸಮೀರ ಬೆಟಗೇರಿ, ಹಮೀದ್ ಬಂಗಾಲಿ, ಮಲೀಕಜಾನ ಕಳಸ, ಇಮ್ತಿಯಾಜ ಬಿಳೇಪಸಾರ, ಇತರರು ಇದ್ದರು.