

ಕೊಪ್ಪ: ಬ್ಯಾಂಕ್, ಅಂಚೆ ಕಚೇರಿ, ಜೀವ ವಿಮಾ ವ್ಯವಹಾರಗಳಲ್ಲಿ ಒತ್ತಾಯಪೂರ್ವಕವಾಗಿ ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರುತ್ತಿರುವುದು ಹಾಗೂ ಸೆ.14ರಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡುತ್ತಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಶುಕ್ರವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಭಾರತ ಗಣರಾಜ್ಯಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ತನ್ನದೇ ಆದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಹೊಂದಿದೆ. ಭಾರತೀಯ ಸಂವಿಧಾನದಲ್ಲಿ ಎಲ್ಲ ಪ್ರಾದೇಶಿಕ ಭಾಷೆಗಳಿಗೆ ಸಮಾನವಾದ ಮಾನ್ಯತೆ ನೀಡಿದೆ. ಆದರೇ, ಬ್ಯಾಂಕ್, ಸರ್ಕಾರಿ ಕಚೇರಿಗಳಲ್ಲಿ ಕನ್ನಡವನ್ನು ನಿರ್ಲಕ್ಷೃ ಮಾಡಲಾಗುತ್ತಿದೆ. ಇದು ಕನ್ನಡಿಗೆರ ಭಾವನೆಗೆ ಧಕ್ಕೆ ಉಂಟು ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ನಡೆಯುವ ಯಾವುದೇ ಪತ್ರ ವ್ಯವಹಾರ, ಅರ್ಜಿ ಾರ್ಮ್, ಚಲನ್, ಡಿಜಿಟಲ್ ಬೋರ್ಡ್, ನಾಮಲಕ, ಎಟಿಎಂ ಯಂತ್ರದ ಘೋಣೆ, ಎಸ್‌ಎಂಎಸ್ ಸಂದೇಶ, ಸಾರ್ವಜನಿಕ ಪ್ರಕಟಣೆಗಳಲ್ಲಿ ಹಿಂದಿ ಬಳಸಬಾರದು. ಈ ಎಲ್ಲ ವಿಭಾಗಗಳಲ್ಲೂ ಕಡ್ಡಾಯವಾಗಿ ಕನ್ನಡ ಬಳಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕರ್ನಾಟಕದ ಶಾಖೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಬಾರದು. ಹಿಂದಿ ದಿವಸ್ ಆಚರಣೆ, ಹಿಂದಿ ಕಲಿಕೆಗೆ ಪ್ರೋತ್ಸಾಹ ಮುಂತಾದ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಮಾರಕವಾಗುವ ಚಟುವಟಿಕೆಗಳನ್ನು ಕರ್ನಾಟಕದಲ್ಲಿ ಮುಂದುವರಿಸ ಬಾರದು ಎಂದರು.
ಕರ್ನಾಟಕ ಭೌಗೋಳಿಕ ವ್ಯಾಪ್ತಿಯಲ್ಲಿ ಸೃಷ್ಟಿಯಾಗುವ ಉದ್ಯೋಗಗಳನ್ನು ಭರ್ತಿ ಮಾಡಲು ಪ್ರತ್ಯೇಕ ನೇಮಕಾತಿ ನಿಯಮ ರೂಪಿಸಿ, ಲಿಖಿತ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ಮೂಲಕ ನೇಮಕಾತಿ ಮಾಡಬೇಕು. ಕರ್ನಾಟಕ ಬ್ಯಾಂಕ್‌ಗಳನ್ನು ಉತ್ತರ ಭಾರತದ ಬ್ಯಾಂಕ್‌ಗಳ ಜತೆ ವಿಲೀನಗೊಳಿಸುವ ಪ್ರಕ್ರಿಯೆ ನಿಲ್ಲಿಸಬೇಕು. ನಾವು ಕರ್ನಾಟಕದಲ್ಲಿ ಕನ್ನಡದಲ್ಲಿ ವ್ಯವಹರಿಸುವುದಾಗಿ ಹಾಗೂ ಹಿಂದಿ ಹೇರಿಕೆ ಮಾಡದಿರುವ ಬಗ್ಗೆ ಬ್ಯಾಂಕ್,ಅಂಚೆ, ವಿಮಾ ಸಂಸ್ಥೆಗಳು ಬಹಿರಂಗ ಪ್ರಕಟಣೆ ನೀಡಬೇಕು ಎಂದು ಒತ್ತಾಯಿಸಿದರು.
ಕಸಾಪದ ನಿಕಟ ಪೂರ್ವ ಅಧ್ಯಕ್ಷೆ ಎಸ್.ಎನ್.ಚಂದ್ರಕಲಾ, ಛಾವಲ್ಮನೆ ಸುರೇಶ್‌ನಾಯ್ಕ, ಜಿನೇಶ್ ಇರ್ವತ್ತೂರು, ್ರಾನ್ಸಿಸ್ ಕಾಡೋಜ, ರಾಜಾ ಶಂಕರ್ ಇದ್ದರು.