

ಪಾಂಡವಪುರ: ಸಾಂವಿಧಾನಿಕ ಮೌಲ್ಯ ಮತ್ತು ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳಲು ಮಕ್ಕಳ ಸಂವಿಧಾನ ಕ್ಲಬ್ ಬಹಳ ಸಹಕಾರಿಯಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ಜಿಲ್ಲಾ ಸಮನ್ವಯಾಧಿಕಾರಿ ಸಿದ್ದರಾಜು ಹೇಳಿದರು.
ತಾಲೂಕಿನ ಕೆರೆತೊಣ್ಣೂರು ಮುರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಮಂಗಳವಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಿಎಂಸಿಎ ಸಹಯೋಗದೊಂದಿಗೆ ಆಯೋಜಿಸಿದ್ದ ಸಮಾಜ ವಿಜ್ಞಾನ ಶಿಕ್ಷಕರಿಗೆ 2ನೇ ಹಂತದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ಅಡಕವಾಗಿರುವ ಧ್ಯೇಯ ಮತ್ತು ಉದ್ದೇಶವನ್ನು ಮಕ್ಕಳಿಗೆ ಮನದಟ್ಟು ಮಾಡಿಕೊಡಬೇಕಾದ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಾಲೆಗಳಲ್ಲಿ ಮಕ್ಕಳ ಸಂವಿಧಾನ ಕ್ಲಬ್ ಪರಿಣಾಮಕಾರಿಯಾಗಿ ಕಾರ್ಯನಿರತವಾಗಲು ವಿಶೇಷ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಸಿಎಂಸಿಎ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ವಿಜಯ್ ರಾಂಪುರ, ಪ್ರಾಂಶುಪಾಲ ಹಮಿದ್ ಖಾನ್ ಮಾತನಾಡಿದರು.
ಸಿಎಂಸಿಎ ತರಬೇತುದಾರ ಸವಿತಾ, ಆರ್.ಮಂಜುನಾಥ, ಬೇಬಿ ಬೆಟ್ಟ ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಕೆ.ಗಿರೀಶ್, ನಿಲಯ ಪಾಲಕ ಆರ್. ಅರುಣ್, ಶಿಕ್ಷಕರಾದ ಮಮತಾ, ಲಕ್ಷ್ಮೀ, ಸ್ಪೂರ್ತಿ ಹಾಗೂ ಮಂಡ್ಯ ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳ 36 ಶಿಕ್ಷಕರು ತರಬೇತಿ ಕಾರ್ಯಾಗಾರದಲ್ಲಿ ಇದ್ದರು.