ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಕಲಿಕಾ ಮಟ್ಟ ಉತ್ತಮಗೊಳ್ಳಲಿ

ಹೊಳೆನರಸೀಪುರದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿರುವ ಎಂಎಂಎಕೆ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಲಿಕಾ ಹಬ್ಬದಲ್ಲಿ ಬಿಇಒ ಸೋಮಲಿಂಗೇಗೌಡ ಮಾತನಾಡಿದರು. ಮಹೇಶ್, ರಾಮಚಂದ್ರಪ್ಪ, ಕೃಷ್ಣಮೂರ್ತಿ, ಮಹೇಶಪ್ಪ, ದೌಲತ್‌ರಾವ್, ಪುಷ್ಪಲತಾ ಇದ್ದರು.
ಹೊಳೆನರಸೀಪುರದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿರುವ ಎಂಎಂಎಕೆ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಲಿಕಾ ಹಬ್ಬದಲ್ಲಿ ಬಿಇಒ ಸೋಮಲಿಂಗೇಗೌಡ ಮಾತನಾಡಿದರು. ಮಹೇಶ್, ರಾಮಚಂದ್ರಪ್ಪ, ಕೃಷ್ಣಮೂರ್ತಿ, ಮಹೇಶಪ್ಪ, ದೌಲತ್‌ರಾವ್, ಪುಷ್ಪಲತಾ ಇದ್ದರು.
Published on

ಹೊಳೆನರಸೀಪುರ: ಪಾಲಕರು ಮತ್ತು ವಿದ್ಯಾರ್ಥಿಗಳನ್ನು ಶಿಕ್ಷಕರು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಮೂಲಕ ಮಕ್ಕಳ ಕಲಿಕಾ ಮಟ್ಟವನ್ನು ಪ್ರಾಥಮಿಕ ಹಂತದಲ್ಲಿಯೇ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿಶೇಷವಾಗಿ ಕಾಳಜಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಸಲಹೆ ನೀಡಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿರುವ ಎಂಎಂಎಕೆ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ  ಆಯೋಜಿಸಿದ್ದ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಕಲಿಕಾ ಗುಣಮಟ್ಟ ದಲ್ಲಿ ಸುಧಾರಣೆ ಕಂಡುಕೊಳ್ಳಲು ಪಠ್ಯಕ್ರಮವನ್ನು ಬಿಡಿಬಿಡಿಯಾಗಿ ಮಾಡಿ ಓದಬೇಕು. ಆ ಮೂಲಕ ಸರಳವಾಗಿ ಕಲಿಯಲು ಸಾಕಷ್ಟು ಅವಕಾಶಗಳಿದ್ದು, ಇಂತಹ ಅತ್ಯಮೂಲ್ಯ ಕಾರ್ಯಕ್ರಮದ ಸಾರವನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಮಕ್ಕಳು ವಿದ್ಯಾಭ್ಯಾಸದ ಸಮಯದಲ್ಲಿ ಕಷ್ಟಪಟ್ಟು ಓದಿದರೆ ಭವಿಷ್ಯದಲ್ಲಿ ಉತ್ತಮ ಮತ್ತು ಮಾದರಿ ಪ್ರಜೆಗಳಾಗಿ ಹೊರಹೊಮ್ಮಬಹುದು. ಮಕ್ಕಳೇ ದೇಶದ ಆಸ್ತಿಯಾಗಿದ್ದು ಶಿಕ್ಷಕರು ಬೋಧನೆ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ತಮ್ಮ ಬೋಧನಾ ಕ್ರಮವನ್ನು ಸರಳೀಕರಣಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಕರು ಪಾಲಕರ ಪ್ರೀತಿಗೆ ಪಾತ್ರರಾದಾಗ ಮಾತ್ರ ಆ ಶಾಲೆ ಎಲ್ಲ ಹಂತದಲ್ಲಿ ಅಭಿವೃದ್ಧಿ ಹೊಂದಲು ಮತ್ತು ಶಾಲೆಯ ವಿದ್ಯಾರ್ಥಿಗಳು ಯಶಸ್ವಿಯಾಗಿ ತಮ್ಮ ಶೈಕ್ಷಣಿಕ ಹಂತವನ್ನು ಪೂರೈಸಲು ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು.

ದೈಹಿಕ ಶಿಕ್ಷಣ ಪರಿವೀಕ್ಷಕ ಮಹೇಶ್, ಶಿಕ್ಷಣ ಸಂಯೋಜಕ ರಾಮಚಂದ್ರಪ್ಪ, ಸಿಆರ್‌ಪಿ ಕೃಷ್ಣಮೂರ್ತಿ, ಮುಖ್ಯ ಶಿಕ್ಷಕರಾದ ಮಹೇಶಪ್ಪ, ದೌಲತ್‌ರಾವ್, ಪುಷ್ಪಲತಾ, ಎಸ್‌ಡಿಎಂಸಿ ಅಧ್ಯಕ್ಷೆ ಪ್ರೀತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net