ಯೋಗದಿಂದ ಆರೋಗ್ಯ ವೃದ್ಧಿ

CTD gonur=----3
Published on

ಚಿತ್ರದುರ್ಗ:ಯೋಗದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗಲಿದೆ ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು. ತಾಲೂಕಿನ ಗೋನೂರು ಸಮೀಪದ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿ, ಪುರಾತನ ಅಭ್ಯಾಸವಾಗಿರುವ ಯೋಗದಿಂದ ಕಾಯಿಲೆಗಳು ದೂರವಾಗುತ್ತವೆ ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಜಾನಕಿ, ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ನಿರಾಶ್ರಿತರ ಪರಿಹಾರ ಕೇಂದ್ರದ ಆಪ್ತ ಸಮಾಲೋಚಕ ಮಹದೇವಯ್ಯ,ಅಧೀಕ್ಷಕ ವಿಜಯ್‌ಕುಮಾರ್, ಶುಶ್ರೂಷಕ ದೇವರಾಜು, ತಿಪ್ಪೇರುದ್ರಮ್ಮ, ಪಾರ್ವತಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net