

ಭಟ್ಕಳ: ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ವೃದ್ಧಿ ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಸಾಧ್ಯವಿದೆ ಎಂದು ಶಿರಾಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ ದೈಮನೆ ಹೇಳಿದರು.
ಶಿರಾಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸೋಲು ಗೆಲವಿಗಿಂತ ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ. ಇಲ್ಲಿನ ತಟ್ಟಿಹಕ್ಕಲ ಕ್ರೀಡಾಂಗಣವನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸಲಾಗುವದು ಎಂದರು.
ತಹಸೀಲ್ದಾರ್ ಎ. ತಿಪ್ಪೇಸ್ವಾಮಿ, ಬಿಇಒ ವಿ.ಡಿ.ಮೊಗೇರ, ತಾಲೂಕು ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಬಿಆರ್ಸಿ ಪೂರ್ಣೀಮಾ ಮೊಗೇರ ಇದ್ದರು. ಬಿಇಒ ವಿ.ಡಿ.ಮೊಗೇರ ಸ್ವಾಗತಿಸಿದರು, ದತ್ತಾತ್ರೇಯ ನಾಯ್ಕ ಐ,ವಿ.ಹೆಗಡೆ ಕಾರ್ಯಕ್ರಮ ನಿರೂಪಿಇಸದರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ಶಿಕ್ಷಕರ ಸಂಘ, ದೈಹಿಕ ಶಿಕ್ಷಕ ಸಂಘದ ಪದಾಧಿಕಾರಿಗಳು ಇತರರು ಇದ್ದರು.