ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ

sports
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಸಿಎ ಗಣೇಶ್ ಹೆಬ್ಬಾರ್ ಉದ್ಘಾಟಿಸಿದರು.
Published on

ಪಡುಬಿದ್ರಿ: ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಿಸಬೇಕು. ಹೆಚ್ಚು ಮಂದಿ ಕ್ರೀಡೆಯಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೆಚ್ಚಿಸಿಕೊಳ್ಳಬೇಕು ಎಂದು ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕೋಶಾಧಿಕಾರಿ ಸಿಎ ಗಣೇಶ್ ಹೆಬ್ಬಾರ್ ಹೇಳಿದರು.

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಗುರುವಾರ ಉದ್ಘಾಟಿಸಿ ಮಾತನಾಡಿದರು.

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರತಿನಿಧಿ ಪ್ರೊ.ನಿತ್ಯಾನಂದ ಮಾತನಾಡಿದರು. ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಜೀವ ನಾಯ್ಕ, ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ ಎ.ವಿ., ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಶ್ರೀಕಾಂತ ರಾವ್, ದೈಹಿಕ ಶಿಕ್ಷಣ ಉಪನ್ಯಾಸಕ ಸುಜಿತ್ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರಾದ ಸಂದೀಪ್ ಕುಮಾರ್, ಶ್ರುತಿ ಉಪಸ್ಥಿತರಿದ್ದರು. ಸಮೃತ್ ಸ್ವಾಗತಿಸಿದರು. ನಿತೀಶಾ ಕಾರ್ಯಕ್ರಮ ನಿರೂಪಿಸಿದರು. ಓಂಕಾರ್ ವಂದಿಸಿದರು.

ಪಠ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದು ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದು ಅಷ್ಟೇ ಮುಖ್ಯ. ಸಂಸ್ಥೆ ಸಂಸ್ಥಾಪಕ ಶ್ರೀ ವಿಬುಧೇಶ ತೀರ್ಥರು ಪೂರ್ಣಪ್ರಜ್ಞದ ವಿದ್ಯಾರ್ಥಿಯೊಬ್ಬ ಮುಂದೆ ಒಲಿಂಪಿಕ್‌ನಲ್ಲಿ ಬಹುಮಾನಗಳಿಸಬೇಕೆಂಬ ಹಂಬಲ ಹೊಂದಿದ್ದರು. ಪ್ರೊ.ನಿತ್ಯಾನಂದ ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಪ್ರತಿನಿಧಿ https://www.vijayavani.net/language-and-culture-awareness-among-young-people https://www.vijayavani.net/do-not-work-without-solving-the-problem

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net