ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ

16 SARAG 2
filter: 0; fileterIntensity: 0.000000; filterMask: 0; captureOrientation: 0; hdrForward: 0; shaking: 0.018270; highlight: 1; algolist: 0; multi-frame: 1; brp_mask: 8; brp_del_th: 0.0003,0.0000; brp_del_sen: 0.1000,0.0000; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 35;
Published on

ಸರಗೂರು: ಆರೋಗ್ಯ ಕಾಪಾಡಿಕೊಂಡರೆ ಕೆಲಸದ ಒತ್ತಡಗಳನ್ನು ನಿವಾರಿಸಿಕೊಳ್ಳಬಹುದು. ಕ್ರೀಡೆ ದೈಹಿಕ ಬಲ ಹೆಚ್ಚಿಸುವ ಜತೆಗೆ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುತ್ತದೆ ಎಂದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮ ಕುಮಾರ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಪಂಚಾಯತಿ ಹಾಗೂ ಯುವಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ 24-25 ಸಾಲಿನ ಕ್ರೀಡಾಕೂಟದ ವಿಜೇತರನ್ನು ಸನ್ಮಾನಿಸಿ ಮಾತನಾಡಿದರು.

ನಮ್ಮ ಇಲಾಖೆಗಳಲ್ಲಿ ಶೇ.50ರಷ್ಟು ಸಿಬ್ಬಂದಿ ಕೊರತೆ ಇದ್ದರೂ, ಅಧಿಕಾರಿಗಳು ಮತ್ತು ನೌಕರರು ಹೆಚ್ಚಿನ ಹೊಣೆಗಾರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಕ್ರೀಡೆಗಳಲ್ಲಿ ಆಸಕ್ತಿ ತೋರಿ ವಿವಿಧ ಪಂದ್ಯಾವಳಿಯಲ್ಲಿ ಸಾಧನೆ ಮಾಡಿದ್ದಾರೆ. ಎಚ್.ಡಿ.ಕೋಟೆ ಮತ್ತು ಸರಗೂರು ಇಲಾಖೆ ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗಿಯಾಗಿ ಎಲ್ಲ ತಾಲೂಕಿನ ಕ್ರೀಡೆಯಲ್ಲಿ ಸೋಲಿಸಿ ದ್ವಿತೀಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮಸ್ಯೆ ನನಗೆ ಅರ್ಥವಾಗಿದೆ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯವಶ್ಯಕ. ಸರ್ಕಾರಿ ನೌಕರರ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದರು.

ಬಿದರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಪರಮೆಶ್, ಹಂಚೀಪುರ ಪಿಡಿಒ ಚನ್ನಪ್ಪ, ಮನುಗನಹಳ್ಳಿ ಪಿಡಿಒ ಯೊಗೇಂದ್ರ, ಸಿಬ್ಬಂದಿ ಅಭಿಲಾಷ್ , ಸಿದ್ದರಾಜು, ಸತ್ಯನಾರಾಯಣ, ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ತಾಪಂ ಲೆಕ್ಕಾಧಿಕಾರಿ ಸದಾಶಿವಯ್ಯ, ನರೇಗಾ ಯೋಜನಾಧಿಕಾರಿ ಮಹದೇವಸ್ವಾಮಿ, ಪಿಡಿಒಗಳಾದ ನಾಗೇಂದ್ರ, ಚಿನ್ನಸ್ವಾಮಿ, ಭಾಗ್ಯಮ್ಮ, ಜ್ಯೋತಿ, ಲೋಕೇಶ್, ಯೊಗೇಂದ್ರ, ಪರಮೇಶ್, ಚನ್ನಪ್ಪ, ಡಾಟಾ ಎಂಟ್ರಿ ಆಪರೇಟರ್ ಸಂಘದ ಅಧ್ಯಕ್ಷ ಮಹದೇವ್, ರಾಜ್ಯ ಪ್ರತಿನಿಧಿ ಅಭಿಲಾಷ್, ಮಹೇಶ್, ಮಧುರ , ಸಿದ್ದರಾಜು, ಅರುಣ್, ಮಹೇಶ್, ಗುಂಡೂರಾವ್, ಸರಸ್ವತಿ, ಪಲ್ಲವಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net