

ಯಲ್ಲಾಪುರ: ಕ್ರೀಡೆಯಿಂದ ಮಗುವಿನಲ್ಲಿ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯಗಳು ಹೆಚ್ಚುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಹೇಳಿದರು.
ತಾಲೂಕಿನ ಕಿರವತ್ತಿಯ ಕೆಪಿಎಸ್ಸಿ ಪ್ರೌಢಶಾಲಾ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಯಲ್ಲಾಪುರ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ಯಲ್ಲಾಪುರ ಹಾಗೂ ಕಿರವತ್ತಿ-1, 2, ಮತ್ತು ಮದನೂರ ಕ್ಲಸ್ಟರ್ನ ಕಿರವತ್ತಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಉರ್ದು ಪ್ರೌಢಶಾಲೆ ಮುಖ್ಯ ಶಿಕ್ಷಕಿ ಲೀನಾ ನಾಯಕ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ, ಪ್ರೌಢಶಾಲೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜನಾರ್ದನ ಗಾಂವ್ಕರ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ ನಾಯಕ, ಬಿಆರ್ಪಿ ಸಂತೋಷ ನಾಯ್ಕ, ಶಿಕ್ಷಕ ಸುಧಾಕರ ನಾಯಕ, ಸಿಆರ್ಪಿಗಳಾದ ವಿಶ್ವನಾಥ ಮರಾಠೆ, ಸಂತೋಷ ನಾಯ್ಕ, ವೆಂಕಟರಾಯ ನಾಯಕ ಇತರರಿದ್ದರು. ಶಿಕ್ಷಕರಾದ ಗಣಪತಿ ಗೌಡ ಪ್ರತಿಜ್ಞಾ, ವಿಶ್ವನಾಥ ಮರಾಠೆ, ಗಂಗಾಧರ ಲಮಾಣಿ, ಸಂತೋಷ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.