

ಗಂಡಸಿ: ಒಂದು ವಾರದಿಂದ ಹೋಬಳಿಯಲ್ಲಿ ತುಂತುರು ಮಳೆ ಸುರಿಯುತ್ತಿದ್ದು ರಸ್ತೆಯ ಎರಡು ಬದಿಯ ಗುಂಡಿಗಳು, ಚರಂಡಿಗಳಲ್ಲಿ ನೀರು ನಿಲ್ಲುತ್ತಿದ್ದು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿರುವುದರಿಂದ ಜನರಲ್ಲಿ ಡೆಂೆ ಜ್ವರದ ಆತಂಕ ಮನೆ ಮಾಡಿದೆ.
ಎಲ್ಲೆಡೆ ಹರಡುತ್ತಿರುವ ಮಾರಕ ಡೆಂೆ ಆರ್ಭಟ ತಡೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾ ಕಾರ್ಯಗಳು ನಡೆಯುತ್ತಿವೆ. ಆದರೆ ಲಾಳನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಗಂಡಸಿ ಹ್ಯಾಂಡ್‌ಪೋಸ್ಟ್ ಸರ್ಕಲ್ ಬಳಿಯ ಡಿವೈಡರ್ ಮೇಲೆ ರಾಶಿ ರಾಶಿ ಕಸ ಬಿದ್ದು ಗಬ್ಬು ವಾಸನೆ ಬರುತ್ತಿದೆ. ಹಾಸನ, ತಿಪಟೂರು, ಅರಸೀಕೆರೆ, ಚನ್ನರಾಯಪಟ್ಟಣ ಈ ಎಲ್ಲ ಪಟ್ಟಣಗಳಿಗೆ ತೆರಲುವ ಪ್ರಯಾಣಿಕರು ಬಸ್ ಹತ್ತುವಾಗ ಮತ್ತು ಇಳಿಯುವಾಗ ಕೆಟ್ಟ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಉದ್ಭವವಾಗಿದೆ.
ಡೆಂೆ ತಡೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ಭೇಟಿ ನೀಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಆದರೆ ಇದ್ಯಾವುದೇ ಕಾರ್ಯಗಳು ನಡೆಯುತ್ತಿಲ್ಲ. ಇಷ್ಟೆಲ್ಲಾ ಸಮಸ್ಯೆಗಳು ಇದ್ದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ, ಆರೋಗ್ಯ ಇಲಾಖೆಯ ಸಿಬ್ಬಂದಿಯಾಗಲಿ ಗಮನಹರಿಸದೆ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.ಗಂಡಸಿ ಹ್ಯಾಂಡ್‌ಪೋಸ್ಟ್ ಸರ್ಕಲ್ ಬಳಿಯ ಡಿವೈಡರ್‌ಗಳ ಮೇಲೆ ರಾಶಿ ರಾಶಿ ಕಸ ಬಿದ್ದು ಕೆಟ್ಟ ವಾಸನೆ ಬರುವಂತಾಗಿದೆ.
ರಸ್ತೆಯ ಬದಿಯಲ್ಲೇ ವಿಲೇವಾರಿಯಾಗದೆ ಬಿದ್ದಿರುವ ಕಸದ ರಾಶಿ.