

ರಾಮದುರ್ಗ: ತಾಲೂಕಿನ ಗೊಣಗನೂರ ಗ್ರಾಮದ ಗರ್ಭಿಣಿಯನ್ನು 108 ಆಂಬುಲೆನ್ಸ್‌ನಲ್ಲಿ ರಾಮದುರ್ಗ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆರೋಗ್ಯ ಸಹಾಯಕ ಸತೀಶ ಹಾಗೂ ಚಾಲಕ ಪ್ರಶಾಂತ ಸೇವೆಗೆ ಕುಟುಂಬಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.