ಆಗಸ್ಟ್‌ನಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ

2
ಚಿಕ್ಕೋಡಿಯಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣ ಕಾಮಗಾರಿಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಗಣೇಶ ಹುಕ್ಕೇರಿ, ಕಾಕಾಸಾಹೇಬ ಪಾಟೀಲ, ವೀರಕುಮಾರ ಪಾಟೀಲ, ಲಕ್ಷ್ಮಣರಾವ ಚಿಂಗಳೆ, ಬಿ.ಎ.ಕುಂಬಾರ ಇದ್ದರು.
Published on

ಚಿಕ್ಕೋಡಿ: ಪಟ್ಟಣದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಿಸಲು 1.50 ಕೋಟಿ ರೂ. ಅನುದಾನ ನೀಡಿದ್ದು, ಹೆಚ್ಚುವರಿಯಾಗಿ 1.50 ಕೋಟಿ ರೂ. ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ.ವೆಚ್ಚದ ಸರ್ಕಾರಿ ನೌಕರರ ಭವನದ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಚಿಕ್ಕೋಡಿ ಕೋರ್ಟ್ ನಿರ್ಮಾಣಕ್ಕೆ 1.50 ಕೋಟಿ ರೂ., ನಿಪ್ಪಾಣಿಯಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ 18 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 15ಕ್ಕೆ ಚಿಕ್ಕೋಡಿಯಲ್ಲಿನ ತಾಯಿ- ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಲಾಗುವುದು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಪಟ್ಟಣದ ಬಸವ ವೃತ್ತದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಅನುದಾನದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದರು.

ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಮಾಜಿ ಸಚಿವ ವೀರಕುಮಾರ ಪಾಟೀಲ, ರಾಮಾ ಮಾನೆ, ಶ್ಯಾಮ ರೇವಡೆ, ಪ್ರಭಾಕರ ಕೋರೆ, ರಾಹುಲ್ ಜಾರಕಿಹೊಳಿ, ಎಸಿ ಸುಭಾಷ ಸಂಪಗಾವಿ, ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಅಣ್ಣಾಸಾಹೇಬ ಹವಲೆ, ಉತ್ತಮ ಪಾಟೀಲ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಬಿ.ಎ.ಕುಂಬಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net