ಡೆತ್‌ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು

26 Spt 01.
Published on


ಸೋಮವಾರಪೇಟೆ : ಬಜೆಗುಂಡಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗ್ರಾಮದ ರಮೇಶ್ ಮತ್ತು ಹೊನ್ನಮ್ಮ ದಂಪತಿ ಪುತ್ರಿ ರೂಪಾ (21) ಮೃತಪಟ್ಟವರು. ಶನಿವಾರ ಪಾಲಕರು ಮನೆಯಿಂದ ಹೊರಗೆ ತೆರಳಿದ್ದ ವೇಳೆ ರೂಪಾ ನೇಣಿಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟಿದ್ದಾರೆ. ರೂಪಾ ತಂದೆ ರಮೇಶ್ ಸೋಮವಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನ್ನ ಮಗಳ ಮೊಬೈಲ್ ಕರೆಗಳನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net