ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ, ಬಡವರಿಗೆ ರಕ್ಷಣೆ ಇಲ್ಲ

IMG-20230505-WA0040.jpg
Published on


ಬೆಳಗಾವಿ: ಕೇಂದ್ರ‌ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ, ಬಡವರಿಗೆ ರಕ್ಷಣೆ ಇಲ್ಲ. ಕೇವಲ 40ರಷ್ಟು ಕಮಿಷನ್ ಗಾಗಿ ಆಡಳಿತ ನಡೆಸುತ್ತಿದೆ ಎಂದು ಎಐಸಿಸಿ ವಕ್ತಾರೆ ಪ್ರಣಿತಿ ಶಿಂಧೆ ವಾಗ್ದಾಳಿ ನಡೆಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ 4 ವರ್ಷದಲ್ಲಿ ಭ್ರಷ್ಟಾಚಾರ ನಡೆಸಿ ಜನರನ್ನು ಲೂಟಿ ಮಾಡಿದ್ದಾರೆ. ಚುನಾವಣೆ ಬಂದಾಗ ಅಭಿವೃದ್ಧಿ ಜಪ ಮಾಡುತ್ತಿದ್ದಾರೆ ಎಂದರು.
  ಎಐಸಿಸಿ ವಕ್ತಾರ ರೋಹನ್ ಗುಪ್ತಾ ಮಾತನಾಡಿ,
ರಾಜ್ಯ ಬಿಜೆಪಿ ಸರಕಾರದ ಶೇ.40 ಭ್ರಷ್ಟಾಚಾರ ನಡೆಸಿರುವುದು ಜಾಹಿರಾಗಿದೆ. ರಾಜ್ಯದಲ್ಲಿ 40 ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಲಾಗುವುದು ಎಂದು ಘೋಷಣೆ ಮಾಡುವ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಮತ್ತೇ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದಾರೆ ಎಂದು ಹರಿಹಾಯ್ದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಳೆಯ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಬೆಲೆ ಏರಿಕೆಯಿಂದ ಮಹಿಳೆಯರು ತತ್ತರಿಸಿದ್ದಾರೆ. ಮಹಿಳೆಯರ ಮೇಲಿನ ಅತ್ಯಾಚಾರ ನಡೆಸುತ್ತಿದ್ದರೂ ಮಹಿಳೆಯರಿಗೆ ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net