ಅರಬಾವಿ ಕ್ಷೇತ್ರದಲ್ಲಿ 50ಲಕ್ಷ ರೂ. ನಗದು ವಶಕ್ಕೆ

IMG-20230427-WA0041.jpg
Published on


ಬೆಳಗಾವಿ: ವಿಧಾನಸಭೆ ಚುನಾವಣೆ ‌ನೀತಿ ಸಂಹಿತೆ ಜಾರಿ ಹಿನ್ನೆಲೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50ಲಕ್ಷ ರೂ.‌ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅರಬಾವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ ಕ್ರೇಟಾ ಕಾರಿನಲ್ಲಿ ದಾಖಲೆ ಇಲ್ಲದೆ 50ಲಕ್ಷ ರೂ.ಸಾಗಾಟ ಮಾಡುತ್ತಿದ್ದರು. ಈ ವೇಳೆ ಚೆಕ್ ಪೋಸ್ಟ್ ಸಿಬ್ಬಂದಿ ಪರಿಶೀಲನೆ ವೇಳೆ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net