ಮತಗಟ್ಟೆಗೆ ತೆರಳಿದ ಚುನಾವಣೆ ಸಿಬ್ಬಂದಿ

IMG-20230509-WA0004.jpg
Published on

ಬೆಳಗಾವಿ:ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಮಂಗಳವಾರ ಇವಿಎಂ, ವಿ.ವಿ.ಪ್ಯಾಟ್‌ಗಳೊಂದಿಗೆ ಮತಗಟ್ಟೆಗೆ ತೆರಳಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಬೆಳಗ್ಗೆ 7 ಗಂಟೆಗೆ ಆಗಮಿಸಿದ  ಚುನಾವಣಾ ಸಿಬ್ಬಂದಿ ಆಯಾ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಕೇಂದ್ರಗಳಲ್ಲಿ ಮತಯಂತ್ರ ಬಳಕೆ ಕುರಿತು ಕೊನೆಯ ಸುತ್ತಿನ ಮಾಹಿತಿ ಪಡೆದುಕೊಂಡರು. ಬಳಿಕ 18 ವಿಧಾನಸಭಾ ಕ್ಷೇತ್ರಗಳಲ್ಲಿನ 4,434 ಮತಗಟ್ಟೆಗಳಿಗೆ ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿ ಸೇರಿ ನಾಲ್ವರು ಕರ್ತವ್ಯ ನಿರ್ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net