ಬಿಜೆಪಿಯಲ್ಲಿ ದಿಗ್ಗಜರು ಮೂಲೆಗುಂಪು

MP RENUKACHARYA mla HONNALLI
Published on

ದಾವಣಗೆರೆ: ಪಕ್ಷ ವಿರೋಧಿ ಚಟುವಟಿಕೆ ಸುಳ್ಳು ಆರೋಪ ಮಾಡಿ ಮಾಜಿ ಶಾಸಕ ಗುರುಸಿದ್ದನಗೌಡ ಹಾಗೂ ಅವರ ಮೂವರು ಪುತ್ರರನ್ನು ಯಾವುದೇ ನೋಟಿಸ್ ನೀಡದೆಯೆ ಜಿಲ್ಲಾಧ್ಯಕ್ಷರು ಉಚ್ಚಾಟನೆ ಕ್ರಮ ಕೈಗೊಂಡಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಪಕ್ಷದ ಉಚ್ಚಾಟಿತ ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರ ದಾವಣಗೆರೆ ನಗರದ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದರ ಪರಿಣಾಮ ಬಿಜೆಪಿ ಹೀನಾಯವಾಗಿ ಸೋತಿತು. ಪಕ್ಷ ಸಂಪೂರ್ಣ ಡ್ಯಾಮೇಜ್ ಆದ ಬಳಿಕ ಈಗ ಎಲ್ಲರೂ ಯಡಿಯೂರಪ್ಪ ನಾಯಕತ್ವ ಎನ್ನುತ್ತಿದ್ದಾರೆ. ಮತ ಗಳಿಸಲು, ಹೋರಾಟಕ್ಕೆ ಮಾತ್ರ ಬಿಎಸ್‌ವೈ ಬೇಕಾ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಜಿಲ್ಲೆಯಲ್ಲಿ ಎಸ್.ಟಿ.ರವೀಂದ್ರನಾಥ್, ಗುರುಸಿದ್ದನಗೌಡ ಸೇರಿ ಅನೇಕ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ. ಜಿಲ್ಲೆಯ ಐವರು ಶಾಸಕರು ಒಗ್ಗಟ್ಟಾಗಿ ಸಚಿವ ಸ್ಥಾನ ಕೇಳಿದರೂ ಕೊಡಲು ಬಿಡದ ಪಕ್ಷದ ಜಿಲ್ಲಾಧ್ಯಕ್ಷರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net