ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ನೂರಕ್ಕೆ ನೂರು ನಮ್ದೇ ಗೆಲುವು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

BSY
Published on

ಶಿವಮೊಗ್ಗ: ಉಪ ಚುನಾವಣೆ ನಡೆಯಲಿರುವ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲುವು ಸಾಧಿಸುತ್ತೇವೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮೋದಿಯವರ ಕಾರ್ಯ ಹಾಗೂ ನಮ್ಮ ಸರ್ಕಾರದ ಒಳ್ಳೆಯ ಕಾರ್ಯಗಳಿಂದಾಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ನಾನು ಹಾಗೂ ವಿಜಯೇಂದ್ರ ಕೊನೆಯ 2-3 ದಿನ ಎರಡೂ ಕ್ಷೇತ್ರದಲ್ಲಿ ಸಮಯ ಮಾಡಿಕೊಂಡು ಪ್ರಚಾರ ಮಾಡುತ್ತೇವೆ ಎಂದಿದ್ದಾರೆ.

ಬೇರೆಯವರ ಟೀಕೆ ಟಿಪ್ಪಣಿಗೆ ನಾನು ಉತ್ತರ ಕೊಡುವುದಕ್ಕೆ ಹೋಗುವುದಿಲ್ಲ. ಜನರಿಗೆ ಬೆಲೆ ಏರಿಕೆಯ ಕಾರಣಗಳು ಗೊತ್ತಿದೆ, ವಿಶ್ವಕ್ಕೂ ಗೊತ್ತಿದೆ. ಆ ಕಾರಣ ಇಟ್ಟುಕೊಂಡು ಚುನಾವಣೆಯಲ್ಲಿ ಜನ ಹಿನ್ನಡೆ ಮಾಡುತ್ತಾರೆ ಎಂದು ನನಗೆ ಅನಿಸಿಲ್ಲ ಎಂದು ಬಿಎಸ್​ವೈ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net