

ಬೆಳಗಾವಿ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ನಗರದ ಸೆಂಟ್ ಜೋಸ್ೆ ಪದವಿಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಜರುಗಿದ 2024-25ನೇ ಸಾಲಿನ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ನಗರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ.
ಬಾಲಕರ ತಂಡದಲ್ಲಿ ರಝೀನ್ ಅಹ್ಮದ್ ಜಮಾದಾರ್ (75ಕೆಜಿ), ಮಂಥನ ಗರೆ (69ಕೆಜಿ), ಋತ್ವಿಕ್ ರಾವ್ (104 ಕೆಜಿ), ಜ್ಞಾನೇಶ್ವರಿ ಧುಡುಂ (57 ಕೆಜಿ) ಚಿನ್ನದ ಪದಕ ಪಡೆದು, ರಾಜ್ಯಮಟ್ಟದ ಬಾಕ್ಸಿಂಗ್‌ಗೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಕರಾಟೆಯಲ್ಲಿ ವೈಷ್ಣವಿ ಲೋಹಾರ ರಜತ ಪದಕ ಪಡೆದಿದ್ದಾಳೆ.
ವಿದ್ಯಾರ್ಥಿಗಳ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಸರ್ವಸದಸ್ಯರು, ಪ್ರಾಚಾರ್ಯರು, ಉಪಪ್ರಾಚಾರ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.