ಉಸ್ತುವಾರಿ ಸಚಿವ ಸಂತೋಷ ಲಾಡ್ ಜಿಲ್ಲಾ ಪ್ರವಾಸ

Santosh Lad 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜು. 29ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್‌ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ತಾಲೂಕಿನ ವೆಂಕಟಾಪುರ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಯಲ್ಲಪ್ಪ ಹಿಪ್ಪಿಯವರ ಮನೆಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯದ ಪ್ರಗತಿ ಪರಿಶೀಲನಾ ಸಭೆ ಜರುಗಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net