ಉಸ್ತುವಾರಿ ಸಚಿವ ಸಂತೋಷ ಲಾಡ್ ಎಚ್ಚರಿಕೆ; ಅಶಿಸ್ತು ತೋರಿದರೆ ಶಿಸ್ತು ಕ್ರಮದ ಖಚಿತ

21 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಮಗೆ, ನಿಮಗೆ ಸಂಬಳ, ಸವಲತ್ತು ಸಿಗುವುದು ಸಾರ್ವಜನಿಕರ ತೆರಿಗೆ ಹಣದಿಂದ. ಕೆಲಸದಲ್ಲಿ ವಿಳಂಬ, ಆಲಸ್ಯ ತೋರುವ ಅಧಿಕಾರಿ, ಸಿಬ್ಬಂದಿ ಮನೆಗೆ ಹೋಗಬಹುದು. ಅಶಿಸ್ತು ತೋರುವವರ ವಿರುದ್ಧ ಶಿಸ್ತು ಕ್ರಮ ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 9ನೇ ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸಿದ ನಂತರ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರತಿ ಜನತಾ ದರ್ಶನದಲ್ಲಿನ ಅರ್ಜಿಗಳನ್ನು ಗಮನಿಸಿದರೆ ಅಧಿಕಾರಿಗಳು ಪರಿಶೀಲಿಸದೆ ಕಾಟಾಚಾರಕ್ಕೆ ಉತ್ತರಿಸುತ್ತಿದ್ದಾರೆ ಎಂಬುದು ತಿಳಿಯುತ್ತದೆ. ಮುಂದಿನ ಹಂತಕ್ಕೆ ಅರ್ಜಿ ರವಾನಿಸಬೇಕಾದರೆ ಅರ್ಜಿದಾರನಿಗೆ ತಿಳಿವಳಿಕೆ ನೀಡಬೇಕು. ಆದರೆ, ಅಧಿಕಾರಿ, ಸಿಬ್ಬಂದಿ ಕಳಕಳಿ, ಮಾನವೀಯತೆ ತೋರದೆ ವರ್ತಿಸುತ್ತಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಲಾಡ್ ಅಸಮಾಧಾನ ವ್ಯಕ್ತಪಡಿಸಿದರು.

* ಮರುಕಳಿಸಿದರೆ ಅಧಿಕಾರಿ ಹೊಣೆಗಾರ: ನೌಕರರು ವೇತನಕ್ಕಾಗಿ ದುಡಿಯಬಾರದು. ಜನರನ್ನು ಕಚೇರಿಗಳಿಗೆ ಅಲೆದಾಡಿಸಬಾರದು. ಕೆಲ ಅರ್ಜಿಗಳು ಪುನರಾರ್ವನೆಯಾಗುತ್ತಿವೆ. ಮುಂದಿನ ಜನತಾ ದರ್ಶನದಲ್ಲಿ ಇದು ಮುಂದುವರಿದರೆ ಸಂಬ0ಧಿಸಿದ ಅಽಕಾರಿಯನ್ನು ಹೊಣೆಗಾರ ಮಾಡಲಾಗುವುದು ಎಂದರು.

ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಎಸ್‌ಪಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ ವೇದಿಕೆಯಲ್ಲಿದ್ದರು. ಜಿಲ್ಲಾ ಮಟ್ಟದ ಅಽಕಾರಿಗಳು, ಸಾರ್ವಜನಿಕರು, ಸಂಘ- ಸಂಸ್ಥೆಗಳ ಸದಸ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net