

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಮಾ. 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನಿAದ ಹೊರಟು ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುವರು. 10 ಗಂಟೆಗೆ ಕೆಸಿಡಿ ಆವರಣದ ಸೃಜನಾ ರಂಗಮ0ದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯಿಂದ ಆಯೋಜಿಸಿರುವ ಕೌಶಲ್ಯ ರೋಜಗಾರ್ ಮೇಳವನ್ನು ಉದ್ಘಾಟಿಸುವರು. ರಾತ್ರಿ 8 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.