

ವಿಜಯವಾಣಿ ಸುದ್ದಿಜಾಲ ಧಾರವಾಡ
ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಜೂ. 15 ಮತ್ತು 16ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 15ರಂದು ಬೆಳಗ್ಗೆ 10 ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿರುವ ಬುದ್ಧ ಬಸವ ಮತ್ತು ಅಂಬೇಡ್ಕರ್ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸುವರು. 16ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಸುವರು. ನಂತರ 11 ಗಂಟೆಗೆ ಜಿಲ್ಲಾಽಕಾರಿ ಕಚೇರಿಯಲ್ಲಿ ಮಳೆ ಹಾನಿ, ಪರಿಹಾರ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಽಕಾರಿಗಳ ಸಭೆ ಜರುಗಿಸುವರು. ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಕಾಲೇಜಿನ ಸೃಜನಾ ರಂಗಮ0ದಿರದಲ್ಲಿ ಹುಬ್ಬಳ್ಳಿ- ಧಾರವಾಡ ಕಾರಿಡಾರ್‌ನಲ್ಲಿ ಇಆರ್‌ಟಿ (ಇಲೆಕ್ಟಿçಕ್ ರ‍್ಯಾಪಿಡ್ ಟ್ರಾನ್ಸಿಟ್) ವ್ಯವಸ್ಥೆಯ ಕುರಿತು ಸಾರ್ವಜನಿಕರು ಮತ್ತು ಬಾಗೀದಾರರೊಡನೆ ಸಮಾಲೋಚನೆ ನಡೆಸುವರು. ರಾತ್ರಿ 8.15ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.