ಪ್ರವಾಹ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಭೇಟಿ

In-charge Minister visits flood affected areas
Published on

ಮಡಿಕೇರಿ:

ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆಗಿರುವ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಶನಿವಾರ ಮಡಿಕೇರಿ-ಸಂಪಾಜೆ ರಾಷ್ಟಿçÃಯ ಹೆದ್ದಾರಿಯ ಕರ್ತೋಜಿ ಬಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ ಕೊಯನಾಡು ಬಳಿ ಮಳೆಯಿಂದ ಹಾನಿಯಾಗಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ ವೀಕ್ಷಿಸಿದರು.
ಹೆದ್ದಾರಿಗೆ ಸಂಬAಧಿಸಿದAತೆ ಸ್ಥಳೀಯರೊಂದಿಗೆ ಸಮಾಲೋಚಿಸಿದ ಸಚಿವರು, ಸಾರ್ವಜನಿಕರಿಗೆ ತೊಂದರೆಯಾಗದAತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು. ಸ್ಥಳೀಯರು ಮಾತನಾಡಿ ಗುಡ್ಡದ ಮಣ್ಣನ್ನು ರಸ್ತೆಗೆ ಸಾಗಿಸುತ್ತಿದ್ದು, ಈ ಕೆಲಸ ಮೊದಲು ಸ್ಥಗಿತವಾಗಬೇಕು ಎಂದು ಸಚಿವರ ಗಮನಕ್ಕೆ ತಂದರು.

2018ರ ನಂತರ ಗುಡ್ಡದ ಮಣ್ಣು ಕುಸಿಯುತ್ತಿದೆ. ಅದಕ್ಕೂ ಮೊದಲು ಸಮಸ್ಯೆ ಇರಲಿಲ್ಲ. ರಸ್ತೆ ಅಗಲೀಕರಣವಾದಂತೆ ಸಮಸ್ಯೆಗಳು ಹೆಚ್ಚಾದವು ಎಂದು ಸ್ಥಳೀಯರೊಬ್ಬರು ತಿಳಿಸಿದರು.
ಸದ್ಯ ಇರುವ ರಸ್ತೆಯನ್ನು ಸರಿಪಡಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ಸಾಧ್ಯವಾದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು. ಇಲ್ಲದಿದ್ದಲ್ಲಿ ಎಲ್ಲರಿಗೂ ತೊಂದರೆ ಆಗಲಿದೆ ಎಂದು ಸ್ಥಳೀಯರು ಸಚಿವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ಹೆದ್ದಾರಿ ವಿಭಾಗದ ಎಂಜಿನಿಯರ್ ಗಿರೀಶ್, ಗುಡ್ಡದ ಮಣ್ಣನ್ನು ಬೇರೆಡೆ ಸ್ಥಳಾಂತರಿಸುತ್ತಿಲ್ಲ ಎಂದು ಮಾಹಿತಿ ನೀಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಎನ್.ಎಸ್. ಬೋಸರಾಜು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದ್ದು, ಈ ಸಂಬAಧ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುವುದರ ಜೊತೆಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ರಸ್ತೆ, ವಿದ್ಯುತ್, ಬೆಳೆಹಾನಿ, ಮನೆ ಹಾನಿ… ಹೀಗೆ ನಷ್ಟದ ಅಂದಾಜು ಮಾಡಿ ಸ್ಥಳೀಯ ಶಾಸಕರ ಜೊತೆಗೂಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು. ಮಳೆಯಿಂದ ಉಂಟಾಗಿರುವ ನಷ್ಟದ ಸಂಬAಧ ಕಂದಾಯ ಸಚಿವರಿಗೂ ಮಾಹಿತಿ ನೀಡಲಾಗುವುದು. ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ತ್ವರಿತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಹಿರಿಯ ಎಂಜಿನಿಯರ್‌ಗಳ ಜತೆ ಚರ್ಚಿಸಲಾಗುವುದು ಎಂದರು.

ಎ.ಎಸ್. ಪೊನ್ನಣ್ಣ ಮಾತನಾಡಿ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಜನಜೀವನ ಅಸ್ತವ್ಯಸ್ತ ಆಗಿದೆ. ಈ ಸಂಬAಧ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಲಾಗುವುದು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶ ಸೇರಿದಂತೆ ಹಲವು ಕಡೆಗೆ ಭೇಟಿ ನೀಡಿ, ಮಾಹಿತಿ ಪಡೆಯಲಾಗಿದೆ ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಕೊಲ್ಯದ ಗಿರೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net