

ಕವಿತಾಳ: ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರತಿಯೊಬ್ಬರೂ ಗೌರವಿಸಿ ಪ್ರೋತ್ಸಾಹಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಸುರೇಶ ಕುರ್ಡಿ ಹೇಳಿದರು. ಉಟಕನೂರಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಗುರುವಾರ ಮಾತನಾಡಿದರು.
ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆಯಿರುತ್ತದೆ. ಪಾಲಕರು- ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನ್ನಭಾಗ್ಯ, ಶೂಭಾಗ್ಯ ಸೇರಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಂತೆ ಮಕ್ಕಳ ಅನುಕೂಲಕ್ಕಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದರು.
ಪ್ರಮುಖರಾದ ಬಸವರಾಜ ಜಂಗಮರಹಳ್ಳಿ, ಪ್ರದೀಪ, ಮಹಾಂತೇಶ, ನಾಗಭೂಷಣ, ನೀಲಕಂಠ, ಅಮರೇಶ, ಎಸ್‌ಡಿಎಮ್‌ಸಿ ಅಧ್ಯಕ್ಷ ವೆಂಕಟೇಶ ನಾಯಕ, ಅಶೋಕ ತಡಕಲ್ ಇತರರಿದ್ದರು.