

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ 5 ವರ್ಷದೊಳಗಿನ ಮಕ್ಕಳಿಗೆ 2 ಹಸಿ ಪೋಲಿಯೊ ನಿರೋಧಕ ಲಸಿಕೆ ಹಾಕಿದರು.
ಪಾಲಿಕೆಯ ವ್ಯಾಪ್ತಿಯಲ್ಲಿ ಈ ವರ್ಷ 5 ವರ್ಷದೊಳಗಿನ 1.25 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದ್ದು, ಸುಮಾರು 1700 ಅರೋಗ್ಯ ಕಾರ್ಯಕರ್ತರು ಈ ಗುರಿ ತಲುಪುವುದಕ್ಕೆ ಶ್ರಮಿಸಲಿದ್ದಾರೆ. ಈ ಕಾರ್ಯಕ್ರಮವು ಮಾ. 6ರವರೆಗೆ ನಡೆಯಲಿದೆ ಎಂದು ಚಿಟಗುಪ್ಪಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ತಿಳಿಸಿದ್ದಾರೆ.