

ವಿಜಯವಾಣಿ ಸುದ್ದಿಜಾಲ ಮಸ್ಕಿ
ಕಲ್ಯಾಣ ಕರ್ನಾಟಕದ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬೆಳೆಯಬೇಕು. ಅದಕ್ಕಾಗಿ ಮಕ್ಕಳಲ್ಲಿರುವ ಪ್ರತಿಭೆಗಳ ಅನಾವರಣಗೊಳಿಸುವುದಕ್ಕಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಭಾರತೀಯ ಸಂಸ್ಕೃತಿ ಉತ್ಸವ -7 ಸಂಯೋಜಕ ವಿಶ್ವನಾಥ ಕೋರಿ ಹೇಳಿದರು.
ಪಟ್ಟಣದ ಶ್ರೀಮಲ್ಲಿಕಾರ್ಜುನ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಸೋಮವಾರ ವಿಕಾಸ ಅಕಾಡೆಮಿ ಕಲಬುರ್ಗಿ ಮಸ್ಕಿ ತಾಲೂಕು ಘಟಕ, ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್, ಸಹಯೋಗದಲ್ಲಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ, ಶಾಸ್ತ್ರೀಯ ನೃತ್ಯ, ರಂಗೋಲಿ ಸ್ಪರ್ಧೆ ಸಮೂಹ ಗಾಯನ, ಹಗ್ಗ ಜಗ್ಗಾಟ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ತಾಲ್ಲೂಕು ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಸ್ಪರ್ಧೆಗಳು ನಡೆಯುತ್ತವೆ.
ಇದನ್ನು ಓದಿ: ಬೆಳ್ಳಿ ಮೂರ್ತಿಯ ಪಲ್ಲಕ್ಕಿ ಉತ್ಸವ
ವಿಭಾಗ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳನ್ನು ಅಂತಾರಾಷ್ಟ್ರೀಯ ಸಾಧಕರಿಂದ ಗೌರವಿಸಲಾಗುತ್ತದೆ. 2025 ಜ.29 ರಿಂದ ೆ.6ರ ವರಗೆ ಸೇಡಮ್ ತಾಲೂಕಿನ ಬೀರನಹಳ್ಳಿಯಲ್ಲಿ ಭಾರತೀಯ ಸಂಸ್ಕೃತಿ-7 ಉತ್ಸವ ನಡೆಯಲಿದೆ ಎಂದು ಕಾರ್ಯಕ್ರಮಗಳ ಸ್ವರೂಪಗಳ ಕುರಿತು ವಿವರಿಸಿದರು.
ವಿಕಾಸ ಅಕಾಡೆಮಿ ಸಂಚಾಲಕ ವೀರೇಶ ಸೌದ್ರಿ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಪಾಲಕರು ಹಾಗೂ ಶಿಕ್ಷಣ ಸಂಸ್ಥೆಗಳು ಮುಖ್ಯಸ್ಥರು ಕಲ್ಯಾಣ ಕರ್ನಾಟಕದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ಬೆಳೆಸುವಂತಾಗಬೇಕು ಎಂದರು.