ಜಂಪ್‌ರೋಪ್‌ನಲ್ಲಿ ಜಿಲ್ಲಾಮಟ್ಟಕ್ಕೆ

1dvk 7
ಬೆಳಗಾವಿ ಜಿಲ್ಲಾಮಟ್ಟದ ಜಂಪ್‌ರೋಪ್ ಸ್ಪರ್ಧೆಗೆ ಆಯ್ಕೆಯಾದ ಆರ್‌ಎಲ್‌ಎಸ್ ಕಾಲೇಜಿನ ವಿದ್ಯಾರ್ಥಿ ಆದರ್ಶ ರೆಂದಾಳೆ ಜತೆಗೆ ಪ್ರಾಚಾರ್ಯ ವಿಶ್ವನಾಥ ಕಾಮಗೋಳ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಡಾ. ಎಸ್.ಎ. ಮೋದಗಿ ಇದ್ದಾರೆ.
Published on

ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಆದರ್ಶ ರೆಂದಾಳೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಗೋಗಟೆ ಪಿಯು ಕಾಲೇಜ್ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕುಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ವಿಜೇತನಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಜಂಪ್ ರೋಪ್‌ನ 3 ನಿಮಿಷಗಳ ಎಂಡ್ಯುರನ್ಸ್‌ನಲ್ಲಿ ಪ್ರಥಮ, ಸಿಂಗಲ್ ಲೆಗ್ ಜಂಪ್ ಹಾಗೂ 30 ಸೆಕೆಂಡ್ ಸ್ಪ್ರಿಂಟ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಸರ್ವ ಸದಸ್ಯರು, ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ, ಸದಸ್ಯರು, ಪ್ರಾಚಾರ್ಯರು, ಉಪಪ್ರಾಚಾರ್ಯರು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net